ಮಕ್ಕಳಲ್ಲಿ ಸಂಶೋಧನಾತ್ಮಕ ಚಿಂತನೆಗಳ ಜ್ಞಾನ ವೃದ್ಧಿಸಿ: ಡಾ.ಮೂಡಿತ್ತಾಯ

Update: 2017-12-16 12:43 GMT

ಉಡುಪಿ, ಡಿ.16: ಜಾಗತಿಕ ಮಟ್ಟದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಬಹಳಷ್ಟು ಪ್ರಮಾಣದ ಬದಲಾವಣೆಗಳು ಆಗುತ್ತಿವೆ. ಈ ನಿಟ್ಟಿನಲ್ಲಿ ನಾವು ಸಂಶೋಧನೆಗೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಆದುದರಿಂದ ಉಪನ್ಯಾಸಕರು ಸಂಶೋಧನಾತ್ಮಕ ಚಿಂತನೆಗಳ ಮೂಲಕ ಮಕ್ಕಳಲ್ಲಿ ಜ್ಞಾನವನ್ನು ವೃದ್ಧಿಸಬೇಕು ಎಂದು ನಿಟ್ಟೆ ವಿಶ್ವ ವಿದ್ಯಾನಿಲಯದ ಪ್ರೊ ವೈಸ್‌ಚಾನ್ಸಲರ್ ಡಾ.ಎಂ.ಎಸ್.ಮೂಡಿತ್ತಾಯ ಹೇಳಿದ್ದಾರೆ.

ಉಡುಪಿಯ ಪೂರ್ಣಪ್ರಜ್ಞ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಇಂಟರ್ನಲ್ ಕ್ವಾಲಿಟಿ ಅಸ್ಯೂರೆನ್ಸ್ ಸೆಲ್ ವತಿಯಿಂದ ಶುಕ್ರವಾರ ಕಾಲೇಜಿನಲ್ಲಿ ಆಯೋಜಿಸಲಾದ ‘ಪದವಿ ಪೂರ್ವ ಕಾಲೇಜುಗಳಲ್ಲಿ ಸಂಶೋ ಧನೆಯ ಗುಣಮಟ್ಟ ವೃದ್ಧಿಯ ಪಾತ್ರ’ ಕುರಿತು ರಾಜ್ಯಮಟ್ಟದ ಕಾರ್ಯಾಗಾರ ವನ್ನು ಉ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಶಿಕ್ಷಣ ಸಂಸ್ಥೆಗಳು ಜ್ಞಾನವನ್ನು ನೀಡುವುದು ಮಾತ್ರವಲ್ಲದೆ ಜ್ಞಾನವನ್ನು ಉತ್ಪಾದಿಸುವ ಕೇಂದ್ರಗಳಾಗಬೇಕು. ಕಲಿಕೆಯ ಅನುಪಾತದಲ್ಲಿ ನಾವು ಸಾಕಷ್ಟು ಹಿಂದುಳಿದಿದ್ದೇವೆ. ಈ ನಿಟ್ಟಿನಲ್ಲಿ ನಮ್ಮ ಶೈಕ್ಷಣಿಕ ಕೌಶಲ್ಯವನ್ನು ವೃದ್ಧಿಗೊಳಿಸಬೇಕಾ ಗಿದೆ. ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಕುವೆಂಪು ವಿವಿಯ ವಿಶ್ರಾಂತ ಉಪಕುಲಪತಿ ಡಾ.ಬಿ.ಎಸ್.ಶೇರಿಗಾರ್, ಪೂರ್ಣಪ್ರಜ್ಞ ಕಾಲೇಜಿನ ಆಡಳಿತ ಮಂಡಳಿಯ ಕಾರ್ಯದರ್ಶಿ ಡಾ.ಜಿ.ಎಸ್. ಚಂದ್ರಶೇಖರ್, ಪ್ರಾಂಶುಪಾಲ ಡಾ.ಬಿ.ಜಗದೀಶ್ ಶೆಟ್ಟಿ ಉಪಸ್ಥಿತರಿದ್ದರು. ಗಣಿತ ಶಾಸ್ತ್ರ ವಿಭಾಗದ ಮುಖ್ಯಸ್ಥ ರಾಘವೇಂದ್ರ ಸ್ವಾಗತಿಸಿದರು. ಅಪೂರ್ವ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News