×
Ad

ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅಧಿಕಾರಿ ಸ್ವೀಕಾರ:ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

Update: 2017-12-16 18:24 IST

ಕೊಳ್ಳೇಗಾಲ,ಡಿ.16: ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಅವರು ಅಧಿಕಾರಿ ಸ್ವೀಕಾರ ಮಾಡಿದ ಹಿನ್ನಲೆ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮ ಆಚರಣೆ ಮಾಡಿದರು.

ಪಟ್ಟಣದ ಮಸೀದಿ ವೃತದಲ್ಲಿ ಶನಿವಾರ ಜಿಲ್ಲಾ ಯುವ ಕಾಂಗ್ರೆಸ್ ಹಾಗೂ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಟಾಕಿ ಸಿಡಿಸಿ, ಸಿಹಿ ವಿತರಿಸುವ ಮೂಲಕ ಸಂಭ್ರಮಿಸಿದರು.
ನಂತರ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯ ಸಿಂಡಿಕೇಟ್ ಸದಸ್ಯರು ಕಿನಕನಹಳ್ಳಿ ರಾಚಯ್ಯ ಮಾತನಾಡಿ, ನಮ್ಮ ನೆಚ್ಚಿನ ನಾಯಕರಾದ ರಾಹುಲ್ ಗಾಂಧಿಯವರು ಇಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿರುವುದು ಸಂತಷ ತಂದಿದೆ. ಪಕ್ಷವನ್ನು ಅತ್ಯಂತ ಯಶಸ್ವಿಯಾಗಿ ನಡೆಸಲಿ ಎಂದು ತಿಳಿಸಿದರು.

ಯುವ ಕಾಂಗ್ರೆಸ್‍ನ ಜಿಲ್ಲಾಧ್ಯಕ್ಷ ಚೇತನ್ ದೊರೆರಾಜು ಮಾತನಾಡಿ, ರಾಹುಲ್ ಗಾಂಧಿಯವರು ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿರುವುದು ನಮ್ಮ ಎಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಸ್ಪೂರ್ತಿ ತಂದಿದೆ. ಅವರ ಸಾಕಷ್ಟು ಅನುಭವಗಳು ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಕಟ್ಟಲು ಸಹಕರವಾಗಲಿ ಎಂದು ತಿಳಿಸಿದರು.
ಈ ಸಂಧರ್ಭದಲ್ಲಿ ನಗರಸಭೆ ಅಧ್ಯಕ್ಷ ಶಾಂತರಾಜು, ಸದಸ್ಯರಾದ ಪರಮೇಶ್ವರಯ್ಯ, ರಾಘವೇಂದ್ರ, ಸುರೇಶ್, ಅಬ್ದುಲ್, ರಾಹೀಲ್, ಶಿವಶಂಕರ್ ಹಾಗೂ ಇತರರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News