×
Ad

ಕುಮಾರಸ್ವಾಮಿ ಜನ್ಮ ದಿನ ಆಚರಿಸಿದ ಕೊಡಗು ಜೆಡಿಎಸ್

Update: 2017-12-16 20:37 IST

ಮಡಿಕೇರಿ ಡಿ.16 :ಮಾಜಿ ಮುಖ್ಯಮಂತ್ರಿ ಹಾಗೂ ಜಾತ್ಯಾತೀತ ಜನತಾದಳದ ರಾಜ್ಯ ವರಿಷ್ಠರಾದ ಹೆಚ್.ಡಿ.ಕುಮಾರಸ್ವಾಮಿ ಅವರ 59 ನೇ ಜನ್ಮದಿನವನ್ನು ಜೆಡಿಎಸ್‍ನ ಕೊಡಗು ಜಿಲ್ಲಾ ಘಟಕ ಮಡಿಕೇರಿಯಲ್ಲಿ ಅರ್ಥಪೂರ್ಣವಾಗಿ ಆಚರಿಸಿತು.

 ನಗರದ ಶ್ರೀಶಕ್ತಿ ವೃದ್ಧಾಶ್ರಮದ ಸಂಧ್ಯಾ ಕಾಲದ ಬಂಧುಗಳಿಗೆ ಜೆಡಿಎಸ್ ಪ್ರಮುಖರು ಹಣ್ಣು ಹಂಪಲು ಹಾಗೂ ವಸ್ತ್ರ ವಿತರಣೆ ಮಾಡಿ ಯೋಗಕ್ಷೇಮ ವಿಚಾರಿಸಿದರು.

 ಈ ಸಂದರ್ಭ ಮಾತನಾಡಿದ ಜೆಡಿಎಸ್ ರಾಜ್ಯ ಉಪಾಧ್ಯಕ್ಷರಾದ ಎಂ.ಎಂ.ಷರೀಫ್, ರಾಜ್ಯ ಕಂಡ ಶ್ರೇಷ್ಠ ನಾಯಕರಲ್ಲಿ ಒಬ್ಬರಾದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಮ್ಮ ಅಧಿಕಾರವಧಿಯಲ್ಲಿ ಸಾಕಷ್ಟು ಜನಪರವಾದ ಕಾರ್ಯಗಳನ್ನು ಮಾಡಿದ್ದು, 2018 ರ ಚುನಾವಣೆಯಲ್ಲಿ ಮತ್ತೆ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷರಾದ ಕೆ.ಎಂ.ಗಣೇಶ್, ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷರಾದ ಇಸಾಕ್, ನಗರಸಭಾ ಸದಸ್ಯರಾದ ಲೀಲಾಶೇಷಮ್ಮ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News