ರಾಹುಲ್ ಗಾಂಧಿ ಆಯ್ಕೆ : ಕೊಡಗು ಕಾಂಗ್ರೆಸ್ ಸಂಭ್ರಮ
ಮಡಿಕೇರಿ,ಡಿ.16 :ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್‍ನ ಅಧ್ಯಕ್ಷರಾಗಿ ರಾಹುಲ್ ಗಾಂಧಿ ಆಯ್ಕೆಯಾದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಡಿಕೇರಿಯಲ್ಲಿ ಸಂಭ್ರಮಾಚರಣೆ ನಡೆಯಿತು. ನಗರದ ಜನರಲ್ ತಿಮ್ಮಯ್ಯ ವೃತ್ತದಲ್ಲಿ ಸಮಾವೇಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಜಯಘೋಷಗಳನ್ನು ಹಾಕಿದರು. ಈ ಸಂದರ್ಭ ಮಾತನಾಡಿದ ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ಎಐಸಿಸಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿರುವ ರಾಹುಲ್ ಗಾಂಧಿಯವರ ದಿಟ್ಟತನದ ರಾಜಕೀಯ ನಡೆ ಹಾಗೂ ಮಾರ್ಗದರ್ಶನದಲ್ಲಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲಾಗುವುದು ಎಂದರು.
ಯುವನಾಯಕನ ಕೈಯನ್ನು ಬಲಪಡಿಸುವಲ್ಲಿ ಯುವ ಸಮುದಾಯ ಕೈಜೋಡಿಸುವಂತೆ ಕರೆ ನೀಡಿದರು. ಮುಂದಿನ ದಿನಗಳಲ್ಲಿ ದೇಶದ ಪ್ರಧಾನಿಯಾಗಿ ರಾಹುಲ್ ಗಾಂಧಿ ಅವರು ಅಧಿಕಾರಕ್ಕೆ ಬರುವುದು ಖಚಿತವೆಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಟಿ.ಪಿ.ರಮೇಶ್ ಮಾತನಾಡಿ, ಯುವನಾಯಕನ ಕೈಗೆ ರಾಜಕೀಯ ಶಕ್ತಿಯನ್ನು ತುಂಬಲು ಯುವಸಮುದಾಯ ಕೈಜೋಡಿಸುವ ಮೂಲಕ ನವಭಾರತ ನಿರ್ಮಾಣಕ್ಕೆ ಕಾರಣಿಭೂತರಾಗಬೇಕೆಂದರು.
ರಾಹುಲ್ ಬ್ರೀಗೇಡ್‍ನ ಜಿಲ್ಲಾ ಸಂಚಾಲಕ ಹಾಗೂ ಮೂಡಾ ಅಧ್ಯಕ್ಷ ಚುಮ್ಮಿದೇವಯ್ಯ ಮಾತನಾಡಿದರು. ಸಂಭ್ರಮಾಚರಣೆಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ರಜಾಕ್, ನಗರಸಭಾ ಸದಸ್ಯರಾದ ಪ್ರಕಾಶ್ ಆಚಾರ್ಯ, ನಂದಕುಮಾರ್, ತಜಸ್ಸುಂ, ಕಾಂಗ್ರೆಸ್ ಪ್ರಮುಖರಾದ ಅಂಬೆಕಲ್ ನವೀನ್ ಕುಶಾಲಪ್ಪ, ಕಾನೆಹಿತ್ಲು ಮೊಣ್ಣಪ್ಪ, ಬಿ.ಎಸ್.ರಮಾನಾಥ್, ಕೊಲ್ಯದ ಗಿರೀಶ್, ಬಿ.ಎಸ್.ತಮ್ಮಯ್ಯ, ಕೆ.ಎ.ಯಾಕೂಬ್, ಸುರಯ್ಯಾ ಅಬ್ರಾರ್, ಎಂ.ಎ. ಉಸ್ಮಾನ್, ತೆನ್ನೀರಾ ಮೈನಾ, ಪ್ರಮುಖರಾದ ಮುನೀರ್ ಮಾಚಾರ್ ಸೇರಿದಂತೆ ಕಾರ್ಯಕರ್ತರು ಹಾಜರಿದ್ದರು