×
Ad

​ಅನಂತ್‌ಕುಮಾರ್ ಹೆಗಡೆ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

Update: 2017-12-16 22:26 IST

ಬೆಂಗಳೂರು, ಡಿ.16: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಸಂಸದೀಯ ಪದಗಳನ್ನು ಬಳಸಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಹೇಳಿಕೆ ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಅವರ ಪ್ರತಿಕೃತಿ ದಹಿಸಿ ಪ್ರತಿಭಟನೆ ನಡೆಸಿದರು.

ಶನಿವಾರ ನಗರದ ಗಾಂಧಿ ಪ್ರತಿಮೆ ಬಳಿ ನೂರಾರು ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಅನಂತಕುಮಾರ್ ಹೆಗಡೆ ಬಿಜೆಪಿ ನಾಯಕರು ಪರಿವರ್ತನಾ ಯಾತ್ರೆ ನೆಪದಲ್ಲಿ ರಾಜ್ಯದಲ್ಲಿ ಅಶಾಂತಿ ಸೃಷ್ಟಿಸುವ ಹೇಳಿಕೆಗಳನ್ನು ನೀಡಿ ಕಾನೂನು ವ್ಯವಸ್ಥೆಗೆ ಧಕ್ಕೆ ತರುತ್ತಿದ್ದಾರೆಂದು ಆರೋಪಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಮುಖಂಡ ವಿ.ಶೇಖರ್, ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದವನ್ನು ಹತ್ತಿಕ್ಕುವ ಸಂದೇಶಗಳನ್ನು ಹಾಕಿ ಸಮಾಜದ ಸ್ವಾಸ್ಥ ಕದಡುತ್ತಿರುವುದಲ್ಲದೇ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಆದೇಶದಂತೆ ಸಂಸದ ಪ್ರತಾಪ ಸಿಂಹ ರಾಜ್ಯದಲ್ಲಿ ಈಗಾಗಲೇ ಶಾಂತಿ ಕದಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅನಂತ್‌ಕುಮಾರ್ ಹೆಗಡೆ ಕೇಂದ್ರ ಸಚಿವ ಎಂಬುದನ್ನು ಮರೆತು ಹಿಂದೂ ಸಂಘಟನೆ ನಾಯಕನಂತೆ ವರ್ತಿಸುತ್ತಿದ್ದಾರೆ. ಅನಂತ್‌ಕುಮಾರ್ ಹೆಗಡೆ ಕೂಡಲೇ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News