×
Ad

ರಾಹುಲ್‍ಗಾಂಧಿ ಎಐಸಿಸಿ ಸಾರಥಿ : ಮಂಡ್ಯದಲ್ಲಿ ಕಾಂಗ್ರೆಸ್‍ನಿಂದ ಸಂಭ್ರಮಾಚರಣೆ

Update: 2017-12-16 22:41 IST

ಮಂಡ್ಯ, ಡಿ.16: ರಾಹುಲ್‍ಗಾಂಧಿ ಎಐಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ಹಿನ್ನೆಲೆಯಲ್ಲಿ ಶನಿವಾರ ಕಾಂಗ್ರೆಸ್ ಕಾರ್ಯಕರ್ತರು ಬೈಕ್ ರ್ಯಾಲಿ ನಡೆಸಿ ಸಿಹಿ ವಿತರಿಸಿ ಸಂಭ್ರಮಿಸಿದರು.

ಜಿಲ್ಲಾಧ್ಯಕ್ಷ ಎಂ.ಎಸ್.ಆತ್ಮಾನಂದ ನೇತೃತ್ವದಲ್ಲಿ ನಗರದ ಸಂಜಯ ವೃತ್ತದಲ್ಲಿ ಸಮಾವೇಶಗೊಂಡ ನೂರಾರು ಮುಖಂಡರು ಮತ್ತು ಕಾರ್ಯಕರ್ತರು, ಪರಸ್ಪರ ಸಿಹಿವಿತರಿಸಿ ಸಂಭ್ರಮ ಹಂಚಿಕೊಂಡರು.

ಮತ್ತೊಂದೆಡೆ ಯುವ ಕಾಂಗ್ರೆಸ್‍ನ ನೂರಾರು ಮಂದಿ ನಗರದ ವಿವಿಧ ರಸ್ತೆಗಳಲ್ಲಿ ಬೈಕ್ ರ್ಯಾಲಿ ನಡೆಸಿ ರಾಹುಲ್ ಗಾಂಧಿ ಅವರಿಗೆ ಜೈಕಾರ ಕೂಗಿ ಸಂತೋಷ ವ್ಯಕ್ತಪಡಿಸಿದರು.

ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಅಂಜನಾ ಶ್ರೀಕಾಂತ್ ನೇತೃತ್ವದಲ್ಲಿ ಮಹಿಳಾ ಕಾರ್ಯಕರ್ತೆಯರು ಎಐಸಿಸಿ ನೂತನಾ ಸಾರಥಿ ರಾಹುಲ್ ಗಾಂಧಿ ಅವರಿಗೆ ಅಭಿನಂದನೆ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News