ಆಸ್ಟ್ರೇಲಿಯನ್ ಓಪನ್‌ನಿಂದ ಗಾಯಾಳು ಸಾನಿಯಾ ಹೊರಕ್ಕೆ

Update: 2017-12-16 18:47 GMT

ಕೋಲ್ಕಾತಾ, ಡಿ.16: ಭಾರತದ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಝಾ ಅವರು ಗಾಯಗೊಂಡಿರುವ ಹಿನ್ನೆಲೆಯಲ್ಲಿ ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಆಸ್ಟ್ರೇಲಿಯ ಓಪನ್ ಟೆನಿಸ್ ಟೂರ್ನಮೆಂಟ್‌ನಿಂದ ದೂರ ಉಳಿಯಲು ನಿರ್ಧರಿಸಿದ್ದಾರೆ.

ಜೈದೀಪ್ ಮುಖರ್ಜಿ ಅಕಾಡಮಿಯಲ್ಲಿ ಪ್ರೇಮ್‌ಜಿತ್ ಲಾಲ್ ಟೆನಿಸ್ ಟೂರ್ನಮೆಂಟ್‌ನ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಸಾನಿಯಾ ಈ ವಿಚಾರವನ್ನು ಸುದ್ದಿಗಾರರಿಗೆ ತಿಳಿಸಿದ್ದಾರೆ.

ವೈದ್ಯರು ಎರಡು ತಿಂಗಳ ಹಿಂದೆ ವಿಶ್ರಾಂತಿ ಪಡೆಯುವಂತೆ ಸಲಹೆ ನೀಡಿದ್ದರು. ಆದರೆ ಗಾಯಕ್ಕೆ ಶಸ್ತ್ರ ಚಿಕಿತ್ಸೆ ನಡೆಸುವ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News