×
Ad

ಡಿ.19: ಫಿಲೋಮಿನಾ ಕಾಲೇಜಿನಲ್ಲಿ ವಾರ್ಷಿಕ ಕ್ರೀಡೋತ್ಸವ

Update: 2017-12-17 19:31 IST

ಪುತ್ತೂರು, ಡಿ. 17: ಇಲ್ಲಿನ ಸಂತ ಫಿಲೋಮಿನಾ ಕಾಲೇಜಿನ ವಾರ್ಷಿಕ ಕ್ರೀಡೋತ್ಸವವು ಡಿ. 19ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ಜರಗಲಿದೆ ಎಂದು ಕಾಲೇಜಿನ ಸಾರ್ವಜನಿಕ ಸಂಪರ್ಕಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕ್ರೀಡಾಕೂಟವನ್ನು ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಮಂಗಳೂರು ವಿಶ್ವವಿದ್ಯಾನಿಲಯದ ಕಬಡ್ಡಿ ತಂಡದ ಮಾಜಿ ನಾಯಕ ಪ್ರವೀಣ್‌ಚಂದ್ರ ಆಳ್ವ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಪುತ್ತೂರು ವಿಧಾನ ಸಭಾ ಕ್ಷೇತ್ರದ ಶಾಸಕಿ ಶಕುಂತಳಾ ಟಿ ಶೆಟ್ಟಿ ಭಾಗವಹಿಸಲಿದ್ದಾರೆ.

ಅತಿಥಿಗಳಾಗಿ ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮುಖ್ಯಸ್ಥರು ಮತ್ತು ಕ್ಯಾಂಪಸ್ ನಿರ್ದೇಶಕರಾಗಿರುವ ರೆ ಡಾ ಆ್ಯಂಟನಿ ಪ್ರಕಾಶ್ ಮೊಂತೆರೊ ಮತ್ತು ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರೆ. ಫಾ. ವಿಜಯ್ ಲೋಬೊ ಭಾಗವಹಿಸಲಿದ್ದು, ಕಾಲೇಜಿನ ಸಂಚಾಲಕರಾದ ರೆ. ಫಾ. ಆಲ್ಫ್ರೆಡ್ ಜೆ ಪಿಂಟೊ ಅಧ್ಯಕ್ಷತೆ ವಹಿಸಲಿದ್ದಾರೆ. ಸಂತ ಫಿಲೋಮಿನಾ ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಲಿಯೊ ನೊರೊನ್ಹಾ ನಿರ್ದೇಶನದಲ್ಲಿ ಜರಗಲಿರುವ ಈ ಕ್ರೀಡಾಕೂಟವನ್ನು ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರಕಾಶ್ ಡಿ’ಸೋಜ, ಸೌಮ್ಯಲತಾ ಕೆ ಮತ್ತು ಕ್ರೀಡಾ ಕಾರ್ಯದರ್ಶಿ ದಿಲೀಪ್ ಕೆ ವೈ ಸಂಯೋಜಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಪ್ರೊ. ಮ್ಯಾಕ್ಸಿಮ್ ಕಾರ್ಲ್ ಬರೆದಿರುವ ಮಂಗಳೂರು ವಿವಿಯ ಬಿಕಾಮ್‌ನ ದ್ವಿತೀಯ ಸೆಮಿಸ್ಟರ್ ಪಠ್ಯ ಪುಸ್ತಕ ’ಫೈನಾನ್ಸಿಯಲ್ ಅಕೌಂಟಿಂಗ್’ ಇದರ ಬಿಡುಗಡೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News