ಪಿಕಪ್ ವಾಹನ ಢಿಕ್ಕಿ: ಬಾಲಕ ಮೃತ್ಯು
ಬಂಟ್ವಾಳ, ಡಿ. 17: ಮಸೀದಿಯಲ್ಲಿ ಕಾರ್ಯಕ್ರಮ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಬಾಲಕನಿಗೆ ಪಿಕಪ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟ ಘಟನೆ ಬೋಳಂತೂರು ಕೆ.ಪಿ ಬೈಲು ಎಂಬಲ್ಲಿ ನಡೆದಿದೆ.
ಬೋಳಂತೂರು ಗ್ರಾಮದ ಕೆ.ಪಿ ಬೈಲು ನಿವಾಸಿ ಬಶೀರ್ ಎಂಬವರ ಪುತ್ರ ಮುಹಮ್ಮದ್ ಖೈಸ್ (11) ಮೃತ ಬಾಲಕ ಎಂದು ಗುರುತಿಸಲಾಗಿದೆ.
ಬೋಳಂತೂರು ಸಮೀಪದ ಕೆ.ಪಿ ಬೈಲು ಎಂಬಲ್ಲಿ ಮೀಲಾದುನ್ನಬಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಈ ಕಾರ್ಯಕ್ರಮ ಮುಗಿಸಿ ಶನಿವಾರ ತಡರಾತ್ರಿ ಸುಮಾರು 1 ಗಂಟೆಗೆ ಮನೆಗೆ ಹಿಂದಿರುಗುತ್ತಿದ್ದ ವೇಳೆ ಬೋಳಂತೂರು ಕಡೆಯಿಂದ ಬಂದ ಪಿಕಪ್ ವಾಹನ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕನಿಗೆ ಢಿಕ್ಕಿ ಹೊಡೆದಿದೆ. ತಕ್ಷಣವೇ ಆತನನ್ನು ಮಂಗಳೂರು ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾಗಿ ತಿಳಿದುಬಂದಿದೆ.
ಖೈಸ್ ಸುರಿಬೈಲ್ ನಲ್ಲಿ 5ನೆ ತರಗತಿ ವಿದ್ಯಾರ್ಥಿಯಾಗಿದ್ದು, ಕೆ.ಪಿ ಬೈಲ್ ಮದರಸದಲ್ಲಿ ಧಾರ್ಮಿಕ ಶಿಕ್ಷಣ ಪಡೆಯುತ್ತಿದ್ದ.
ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಟ್ವಾಳ ಸರ್ಕಲ್ ಇನ್‌ಸ್ಪೆಕ್ಟರ್ ಪ್ರಕಾಶ್ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.