ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಬೆಂಕಿ ಅವಘಡ: 100ಕ್ಕೂ ಅಧಿಕ ಅಂಗಡಿಗಳು ಭಸ್ಮ

Update: 2017-12-17 16:04 GMT

ಭೋಪಾಲ್, ಡಿ.17: ಶಾಪಿಂಗ್ ಕಾಂಪ್ಲೆಕ್ಸ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ನೂರಕ್ಕೂ ಅಧಿಕ ಅಂಗಡಿಗಳು ಸುಟ್ಟು ಭಸ್ಮವಾಗಿರುವ ಘಟನೆ ಮಧ್ಯ ಪ್ರದೇಶದ ಭೋಪಾಲ್‌ನ ಬೈರಾಘಡ್‌ನಲ್ಲಿ ಸಂಭವಿಸಿದೆ.

ಬೆಂಕಿಯನ್ನು ನಂದಿಸಲು ಅಗ್ನಿಶಾಮಕದಳದ ಇಪ್ಪತ್ತಕ್ಕೂ ಹೆಚ್ಚು ವಾಹನಗಳು ಆಗಮಿಸಿದ್ದು ಕಾರ್ಯಾಚರಣೆಯಲ್ಲಿ ತೊಡಗಿವೆ. ಘಟನೆಗೆ ನಿಖರ ಕಾರಣ ಇನ್ನೂ ಕೂಡಾ ತಿಳಿದುಬಂದಿಲ್ಲ. ಇಲ್ಲಿಯವರೆಗೆ ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News