ಡಿ.18: ಜಿಲ್ಲಾಧಿಕಾರಿ ಕಚೇರಿ ಚಲೋ
Update: 2017-12-17 21:09 IST
ಮಂಗಳೂರು, ಡಿ.17: ಗ್ರಾಮಾಂತರ ರಿಕ್ಷಾ ಚಾಲಕರಿಗೆ ಮಂಗಳೂರು ನಗರ ಪ್ರವೇಶ ನಿಷೇಧಿಸಿರುವ ಜಿಲ್ಲಾಡಳಿತದ ಧೋರಣೆಯನ್ನು ವಿರೋಧಿಸಿ ಹಾಗೂ ರಿಕ್ಷಾ ಚಾಲಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ತುಳುನಾಡ ರಕ್ಷಣಾ ವೇದಿಕೆಯ ಮಂಗಳೂರು ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ ಡಿ.18ರಂದು ಪೂರ್ವಾಹ್ನ 11ಕ್ಕೆ ದ.ಕ.ಜಿಲ್ಲಾಧಿಕಾರಿ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟನೆ ತಿಳಿಸಿದೆ.