ಜಿಗ್ನೇಶ್ ಮೆವಾನಿಗೆ ಭರ್ಜರಿ ಜಯ

Update: 2017-12-18 06:01 GMT

ಅಹ್ಮದಾಬಾದ್, ಡಿ.18: ಗುಜರಾತ್ ವಿಧಾನ ಸಭಾ ಚುನಾವಣೆಯಲ್ಲಿ ವಡಗಾಂವ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಜಿಗ್ನೇಶ್ ಮೆವಾನಿ 10 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಬಿಜೆಪಿ ಅಭ್ಯರ್ಥಿಯ ವಿರುದ್ಧ ಜಯ ಗಳಿಸಿದ್ದಾರೆ.

ಮೂಲಗಳ ಪ್ರಕಾರ ಮೆವಾನಿ 50,240 ಮತಗಳನ್ನು ಪಡೆದಿದ್ದರೆ, ಬಿಜೆಪಿಯ ಚಕ್ರವರ್ತಿ ವಿಜಯ್ ಕುಮಾರ್ ಹರ್ಖಾಭಾಯ್ 38238 ಮತಗಳನ್ನು ಗಳಿಸಿದ್ದಾರೆ ಎನ್ನಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News