×
Ad

ಸ್ವ ಉದ್ಯೋಗಕ್ಕೆ ಅರ್ಜಿ ಸಲ್ಲಿಸಲು ಸೂಚನೆ

Update: 2017-12-18 20:32 IST

ಉಡುಪಿ, ಡಿ.18: ಪ್ರಸಕ್ತ ಸಾಲಿನ ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಸಿಎಂಇಜಿಪಿ)ಯಡಿ ಸ್ವಉದ್ಯೋಗ ಸ್ಥಾಪಿಸಲು ಆಸಕ್ತಿ ಇರುವ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ/ಯುವತಿಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

 ಈ ಯೋಜನೆಯು ಕರ್ನಾಟಕ ಸರಕಾರ ಗ್ರಾಮೀಣ ಪ್ರದೇಶದಲ್ಲಿ ಸ್ವಂತ ಉದ್ಯೋಗ ಕಲ್ಪಿಸುವ ಉದ್ದೇಶವನ್ನು ಹೊಂದಿದ್ದು, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ( ಕೆವಿಐಬಿ) ಮೂಲಕ ಇದನ್ನು ಜಾರಿಗೊಳಿಸಲಾಗುತ್ತದೆ.

ಯೋಜನೆಯಲ್ಲಿ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಯುವಕ/ಯುವತಿ ಯರಿಗೆ ಗರಿಷ್ಠ ಯೋಜನಾ ವೆಚ್ಚ 10 ಲಕ್ಷ ರೂ. ಬ್ಯಾಂಕ್ ಸಾಲದೊಂದಿಗೆ ಹೊಸ ಕೈಗಾರಿಕೆ ಉತ್ಪಾದನೆ ಚಟುವಟಿಕೆ ಹಾಗೂ ಆಯ್ದ ಕೆಲವು ಸೇವಾ ಘಟಕ ಸ್ಥಾಪಿಸುವವರಿಗೆ ಅವಕಾಶವಿದ್ದು, ಯೋಜನಾ ವೆಚ್ಚದ ಶೇ.25ರಿಂದ 35ರವರೆಗೆ ಸಹಾಯಧನ ನೀಡಲಾಗುತ್ತದೆ.

ಅಭ್ಯರ್ಥಿ ಕನಿಷ್ಠ 8ನೇ ತರಗತಿ ಉತ್ತೀರ್ಣರಾಗಿದ್ದು, ಕನಿಷ್ಠ 21ವರ್ಷ ತುಂಬಿರಬೇಕು. ಸಾಮಾನ್ಯ ವರ್ಗದವರಿಗೆ ಗರಿಷ್ಠ ವಯೋಮಿತಿ 35 ವರ್ಷ. ವಿಶೇಷ ವರ್ಗದವರಿಗೆ ( ಮಹಿಳೆ/ಪರಿಶಿಷ್ಠ ಜಾತಿ / ಪರಿಶಿಷ್ಠ ಪಂಗಡ/ ಹಿಂದುಳಿದ ವರ್ಗ/ ಅಲ್ಪಸಂಖ್ಯಾತರು/ಮಾಜಿ ಯೋಧರು/ ಅಂಗವಿಕಲರು) ಗರಿಷ್ಠ ಮಿತಿ 45 ವರ್ಷ. ನಿರುದ್ಯೋಗಿ ಯುವಕ/ ಯುವತಿಯರು ವೆಬ್‌ಸೈಟ್ -http://cmegp.kar.nic.in-  ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಯನ್ನು ನೋಂದಾಯಿಸಿ, ಅರ್ಜಿ ಪ್ರತಿಯನ್ನು ನಿಗದಿತ ದಾಖಲೆಗಳೊಂದಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, 36-ಸಿ, ಶಿವಳ್ಳಿ, ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ-576104(ದೂರವಾಣಿ ಸಂಖ್ಯೆ: 0820-2575650) ಹಾಗೂ ಜಿಲ್ಲಾ ಅಧಿಕಾರಿಗಳು, ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ರಜತಾದ್ರಿ, ಬಿ ಬ್ಲಾಕ್, 2ನೇ ಮಹಡಿ, ಮಣಿಪಾಲ, ಉಡುಪಿ ( ದೂರವಾಣಿ:0820-2574855) ಕಚೇರಿಗೆ ಕಳುಹಿಸಬೇಕು.

ಹೆಚ್ಚಿನ ವಿವರಗಳನ್ನು ಜಿಲ್ಲಾ ಕೈಗಾರಿಕಾ ಕೇಂದ್ರ, 36-ಸಿ, ಶಿವಳ್ಳಿ, ಕೈಗಾರಿಕಾ ಪ್ರದೇಶ, ಮಣಿಪಾಲ ಹಾಗೂ ತಾಲೂಕಿನ ಕೈಗಾರಿಕಾ ವಿಸ್ತರಣಾಧಿಕಾರಿಗಳ ಕಚೇರಿಗಳಲ್ಲಿ ಹಾಗೂ ಕೆವಿಐಬಿ ಕಚೇರಿ, ರಜತಾದ್ರಿ ಮಣಿಪಾಲ ಕಚೇರಿಯಲ್ಲಿ ಸಹ ಪಡೆಯಬಹುದಾಗಿದೆ.

ಸರಕಾರದ ನಿಯಾಮಾನುಸಾರ ವಿಶೇಷ ವರ್ಗದ ಅರ್ಜಿದಾರರಿಗೆ ಆದ್ಯತೆ ಯನ್ನು ನೀಡಲಾಗುವುದು. ಅ್ಯರ್ಥಿಗಳಿಗೆ ಒಂದು ವಾರದ ಉದ್ಯಮಶೀಲನಾ ತರಬೇತಿ ಪಡೆಯುವುದು ಕಡ್ಡಾಯವಾಗಿದೆ. ಡಿ.19ರಿಂದ ಜ.10ರವರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶವಿದೆ. ಇಂಟರ್‌ನೆಟ್‌ನಲ್ಲಿ ತೆಗೆದ ಅರ್ಜಿಯ ಪ್ರಿಂಟ್ ಪ್ರತಿ ಹಾಗೂ ಇತರ ದಾಖಲೆಗಳನ್ನು ಕಚೇರಿಗೆ ಅಥವಾ ಕೆವಿಐಬಿಗೆ ಸಲ್ಲಿಸಲು ಜ.30ರವರೆಗೆ ಅವಕಾಶವಿದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರ ಪ್ರಕಟಣೆಯಲ್ಲಿ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News