ಲಾರಿ ಢಿಕ್ಕಿ: ಎರಡು ವಿದ್ಯುತ್ ಕಂಬಗಳಿಗೆ ಹಾನಿ
Update: 2017-12-18 20:37 IST
ಮಣಿಪಾಲ, ಡಿ.18: ಮಣಿಪಾಲ- ಅಲೆವೂರು ರಸ್ತೆಯ ಶಾಂತಿನಗರದಲ್ಲಿ ಇಂದು ಬೆಳಗ್ಗೆ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯ ಎರಡು ವಿದ್ಯುತ್ ಕಂಬಗಳಿಗೆ ಹಾನಿಯಾಗಿರುವ ಬಗ್ಗೆ ವರದಿಯಾಗಿದೆ.
ಚಾಲಕ ನಿರ್ಲಕ್ಷ್ಯದಿಂದ ಲಾರಿಯು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದ್ದು, ಇದರಿಂದ ಕಂಬಗಳು ಮುರಿದು ಬಿದ್ದು ಮೆಸ್ಕಾಂಗೆ ಸಾವಿರಾರು ರೂ. ನಷ್ಟ ಉಂಟಾಗಿದೆ. ಅಪಘಾತಕ್ಕೆ ಕಾರಣವಾದ ಲಾರಿಯವರು ಮೆಸ್ಕಾಂಗೆ ದಂಡ ಪಾವತಿಸಿದ ಹಿನ್ನೆಲೆಯಲ್ಲಿ ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.