ತು.ರ.ವೇ.ಯಿಂದ ಜಿಲ್ಲಾಧಿಕಾರಿ ಕಚೇರಿ ಚಲೋ
ಮಂಗಳೂರು, ಡಿ.18: ಗ್ರಾಮಾಂತರ ರಿಕ್ಷಾ ಚಾಲಕರಿಗೆ ಮಂಗಳೂರು ನಗರ ಪ್ರವೇಶ ನಿಷೇಧಿಸಿರುವ ಜಿಲ್ಲಾಡಳಿತದ ಧೋರಣೆಯನ್ನು ವಿರೋಧಿಸಿ ಹಾಗೂ ರಿಕ್ಷಾ ಚಾಲಕರ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ತುಳುನಾಡ ರಕ್ಷಣಾ ವೇದಿಕೆಯ ಮಂಗಳೂರು ವಿಧಾನ ಸಭಾ ಕ್ಷೇತ್ರ ಸಮಿತಿ ವತಿಯಿಂದ ಸೋಮವಾರ ದ.ಕ.ಜಿಲ್ಲಾಧಿಕಾರಿ ಚಲೋ ಕಾರ್ಯಕ್ರಮ ನಡೆಸಲಾಯಿತು.
ತುರವೇ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜಪ್ಪುಬೇಡಿಕೆಗಳನ್ನು ಈಡೇರಿಸದಿದ್ದರೆ ರಿಕ್ಷಾ ಬಂದ್‌ಗೆ ಕರೆ ನೀಡಲಾಗುವುದು ಎಂದು ಎಚ್ಚರಿಸಿದರು. ತು.ರ.ವೇ ಕೇಂದ್ರೀಯ ಮಂಡಳಿ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಭಟ್ ಕಡಬ, ತು.ರ.ವೇ. ಮಂಗಳುರು ವಿಧಾನ ಸಭಾ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಸಿರಾಜ್ ಅಡ್ಕರೆ, ರಹೀಂ ಕುತ್ತಾರ್ ಮಾತನಾಡಿದರು.
ಕಾರ್ಯಕ್ರಮದಲ್ಲಿ ತು.ರ.ವೇ. ಕೇಂದ್ರೀಯ ಮಂಡಳಿ ಕೋಶಾಧಿಕಾರಿ ಅಬ್ದುಲ್ ರಶೀದ್ ಜಪ್ಪು, ಕೇಂದ್ರೀಯ ಸಂಘಟನಾ ಕಾರ್ಯದರ್ಶಿ ಆನಂದ್ ಅಮೀನ್ ಅಡ್ಯಾರ್, ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ಜ್ಯೋತಿಕಾ ಜೈನ್, ಯುವ ಘಟಕದ ಜಿಲ್ಲಾಧ್ಯಕ್ಷ ಹರೀಶ್ ಶೆಟ್ಟಿ, ರಕ್ಷಿತ್ ಬಂಗೇರ ಕುಡುಪು, ವಿದ್ಯಾ ಯು.ಜೋಗಿ, ಅಬ್ದುಲ್ ರಹ್ಮಾನ್ ಉಳ್ಳಾಲ, ಪ್ರಕಾಶ್ ಪಿ.ಬಿ., ರೇಷ್ಮಾ ಉಳ್ಳಾಲ್, ಭೂಷನ್ ಕುಲಾಲ್, ನಿಶಾದ್ ಎಮ್ಮೆಕೆರೆ, ಪ್ರಸಾದ್, ನಾಗರಾಜ್ ಕುದ್ರೋಳಿ, ಸಾದಿಕ್ ಅಡ್ಕರೆ, ಗಂಗಾಧರ್ ಅತ್ತಾವರ, ಚಂದ್ರಹಾಸ ನೀರುಮಾರ್ಗ, ರಝಾಕ್, ಸಂತೋಷ್ ಉಪಸ್ಥಿತರಿದ್ದರು.