ಮಂಗಳೂರು: ರೋಟರಿ ಜಿಲ್ಲಾಮಟ್ಟದ ರಸಪ್ರಶ್ನೆ ಸ್ಪರ್ಧಾ ಕೂಟ
ಮಂಗಳೂರು, ಡಿ.16: ರೋಟರಿ ಮಂಗಳೂರು ಸೆಂಟ್ರಲ್ ಸಂಸ್ಥೆಯ ಆಶ್ರಯದಲ್ಲಿ ರೋಟರಿ ಮಾಹಿತಿ ಮತ್ತು ಜಾಗೃತಿ ಅಭಿಯಾನದ ಅಂಗವಾಗಿ ರೋಟರಿ ಜಿಲ್ಲಾ ಮಟ್ಟದ 12ನೆ ವಾರ್ಷಿಕ ಅಂತರ್ ರೋಟರಿ ಕ್ಲಬ್ ರಸಪ್ರಶ್ನಾ ಸ್ಪರ್ಧಾ ಕೂಟವು ನಗರದ ಈಡನ್ ಕ್ಲಬ್ ಸಭಾಂಗಣದಲ್ಲಿ ಇತ್ತೀಚೆಗೆ ಜರಗಿತು.
ರೋಟರಿ ಕ್ಲಬ್ ಬೈಕಂಪಾಡಿ ಸಂಸ್ಥೆಯನ್ನು ಪ್ರತಿನಿಧಿಸಿದ ಸುಭೋದ್ ಕುಮಾರ್ ದಾಸ್ ಮತ್ತು ಪ್ರಸಾದ್ ಪ್ರಭು ಜೋಡಿ ತಂಡ 210 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಪಡೆದು ರೋಟರಿ ಪ್ರತಿಷ್ಠಿತ ಫಲಕ ಗಳಿಸಿತು. ರೋಟರಿ ಕ್ಲಬ್ ಮೈಸೂರು ಜಯನಗರ ಸಂಸ್ಥೆಯನ್ನು ಪ್ರತಿನಿಧಿಸಿದ ಎಚ್.ಎಂ. ಹರೀಶ್ 110 ಅಂಕಗಳನ್ನು ಪಡೆದು ದ್ವೀತಿಯ ಸ್ಥಾನ ಪಡೆದರು.
ಮುಖ್ಯ ಅತಿಥಿಯಾಗಿ ರೋಟರಿ ಜಿಲ್ಲಾ ನಿಯೋಜಿತ ಗವರ್ನರ್ ರೋನಾಥ್, ವಲಯ 3ರ ಸಹಾಯಕ ಗವರ್ನರ್ ರಾಜೇಂದ್ರ ಕಲ್ಬಾವಿ ಗೌರವ ಅತಿಥಿಯಾಗಿ ಪಾಲ್ಗೊಂಡರು. ಸಂಸ್ಥೆಯ ಸಾಪ್ತಾಹಿಕ ವಾರ್ತಾ ಗೃಹ ಪತ್ರಿಕೆ ‘ಸೆಂಟೊರ್’ ಬಿಡುಗಡೆಗೊಳಿಸಲಾಯಿತು. ಕ್ಲಬ್‌ನ ಅಧ್ಯಕ್ಷ ರೇಮಂಡ್ ಡಿಕುನ್ಹಾ ಅಧ್ಯಕ್ಷತೆ ವಹಿಸಿದ್ದರು. ವಲಯ ಪ್ರತಿನಿಧಿ ಅನಿಲ್ ಗೊನ್ಸಾಲ್ವಿಸ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.