ಚುನಾವಣೆಯಲ್ಲಿ ಗೆಲುವು: ದ.ಕ. ಜಿಲ್ಲಾ ಬಿಜೆಪಿ ವಿಜಯೋತ್ಸವ

Update: 2017-12-18 16:46 GMT

ಮಂಗಳೂರು, ಡಿ.18: ಗುಜರಾತ್ ಮತ್ತು ಹಿಮಾಚಲ ಪ್ರದೇಶದ ಬಿಜೆಪಿ ಗೆಲುವು ಕರ್ನಾಟಕದ ಚುನಾವಣೆಗೆ ದಿಕ್ಸೂಚಿಯಾಗಲಿದೆ. ದ.ಕ. ಜಿಲ್ಲೆಯಲ್ಲೂ ಮುಂದಿನ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಪ್ರೇರಣೆಯಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.

ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಹಿನ್ನೆಲೆಯಲ್ಲಿ ನಗರದ ಪಿವಿಎಸ್ ವೃತ್ತ ಬಳಿಯ ಬಿಜೆಪಿ ಜಿಲ್ಲಾ ಘಟಕ ಕಚೇರಿ ಮುಂಭಾಗ ಸೋಮವಾರ ನಡೆದ ವಿಜಯೋತ್ಸವದಲ್ಲಿ ಅವರು ಮಾತನಾಡಿದರು.

ಗುಜರಾತ್, ಹಿಮಾಚಲ ಪ್ರದೇಶದ ಲಿತಾಂಶ ರಾಜ್ಯದಲ್ಲೂ ಬರಲಿದೆ. ಮೋದಿ ತನಗೆ ಹೆದರುತ್ತಾರೆ ಎಂದು ಸಿದ್ದರಾಮಯ್ಯ ಹೇಳುತ್ತಿದ್ದರು. ಇಂದಿನಿಂದ ನಿದ್ದೆಯಲ್ಲೂ ಸಿದ್ದರಾಮಯ್ಯ ಅವರು ಮೋದಿಗೆ ಹೆದರುತ್ತಾರೆ. ಈ ಲಿತಾಂಶ ರಾಜ್ಯದಲ್ಲಿ ಬಿಜೆಪಿ ಗೆಲುವಿನ ಮೊದಲ ಹೆಜ್ಜೆ. ಬಿಜೆಪಿ ಕಾರ್ಯಕರ್ತರ ಹುಮ್ಮಸ್ಸು ಇಮ್ಮಡಿಯಾಗಿದೆ. ಇಂದಿನ ವಿಜಯಯೋತ್ಸವ ಮೂಲಕ ಕರ್ನಾಟಕದಲ್ಲೂ ಬಿಜೆಪಿಯ ವಿಜಯೋತ್ಸವ ಆರಂಭಗೊಂಡಿದೆ ಎಂದು ನಳಿನ್ ಕುಮಾರ್ ಕಟೀಲ್ ನುಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ಮಠಂದೂರು, ವಿಧಾನ ಪರಿಷತ್ ಮಾಜಿ ಸದಸ್ಯ ಮೋನಪ್ಪ ಭಂಡಾರಿ, ದ.ಕ.ಜಿಪಂ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು, ಉಪಾಧ್ಯಕ್ಷೆ ಕಸ್ತೂರಿ ಪಂಜ, ವಿಧಾನ ಸಭೆ ಮಾಜಿ ಉಪಸ್ಪೀಕರ್ ಎನ್. ಯೋಗೀಶ್ ಭಟ್, ಜಿಲ್ಲಾ ಉಪಾಧ್ಯಕ್ಷ ರವಿಶಂಕರ ಮಿಜಾರ್, ಪ್ರಧಾನ ಕಾರ್ಯದರ್ಶಿ ಕಿಶೋರ್ ರೈ, ಬಿಜೆಪಿ ಮಂಗಳೂರು ದಕ್ಷಿಣ ಮಂಡಲ ಅಧ್ಯಕ್ಷ ವೇದವ್ಯಾಸ ಕಾಮತ್, ರಾಜ್ಯ ಕೈಗಾರಿಕಾ ಪ್ರಕೋಷ್ಠ ಸಹ ಸಂಚಾಲಕ ಬದ್ರಿನಾಥ ಕಾಮತ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಪೂಜಾ ಪೈ, ಪ್ರಮುಖರಾದ ರೂಪಾ ಡಿ. ಬಂಗೇರ, ಸುಧೀರ್ ಶೆಟ್ಟಿ ಕಣ್ಣೂರು, ಪ್ರೇಮಾನಂದ ಶೆಟ್ಟಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News