ರಸ್ತೆ ಅಪಘಾತ : ತಂದೆ ಸಾವು, ಪುತ್ರನಿಗೆ ಗಾಯ
Update: 2017-12-19 22:11 IST
ಮದ್ದೂರು, ಡಿ.19: ತಾಲೂಕಿನ ಕೆ.ಹೊನ್ನಲಗೆರೆ ಗ್ರಾಮದ ಬಳಿ ಬೈಕ್‍ಗೆ ಟಿಪ್ಪರ್ ಢಿಕ್ಕಿ ಹೊಡೆದು ತಂದೆ ಸ್ಥಳದಲ್ಲೇ ಸಾವನ್ನಪ್ಪಿ, ಪುತ್ರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ.
ಹುಲಿಗೆರೆ ಗ್ರಾಮದ ದೇವಯ್ಯ(65) ಅಪಘಾತದಲ್ಲಿ ಸಾವನ್ನಪ್ಪಿದ್ದು, ತೀವ್ರವಾಗಿ ಗಾಯಗೊಂಡಿರುವ ಪುತ್ರ ಲೋಕೇಶ್ ಅವರನ್ನು ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ.
ತಂದೆ ಮಗ ಇಬ್ಬರು ತಮ್ಮ ಗ್ರಾಮದಿಂದ ಕೆ.ಹೊನ್ನಲಗೆರೆಗೆ ಆಸ್ಪತ್ರೆಗೆಂದು ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಮದ್ದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮವಹಿಸಿದ್ದಾರೆ.