×
Ad

ಡಿ. 23: ವಿಟ್ಲದಲ್ಲಿ ರಕ್ತದಾನ ಶಿಬಿರ, ಸಾಧಕರಿಗೆ ಸನ್ಮಾನ

Update: 2017-12-19 23:04 IST

ವಿಟ್ಲ, ಡಿ. 19: 'ಡಿ ಗ್ರೂಪ್ ವಿಟ್ಲ' ಹಾಗೂ ಬ್ಲಡ್ ಡೋನರ್ಸ್ ಮಂಗಳೂರು ಜಂಟಿ ಆಶ್ರಯದಲ್ಲಿ ಕೆ.ಎಂ.ಸಿ ಆಸ್ಪತ್ರೆ ಇದರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರವು ಡಿ. 23ರಂದು ಬೆಳಗ್ಗೆ 9ರಿಂದ ವಿಟ್ಲದ ವಿಎಚ್ ಕಟ್ಟಡದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ರಕ್ತದಾನ ಶಿಬಿರದ ಜೊತೆ ಸನ್ಮಾನ ಕಾರ್ಯಕ್ರಮವೂ ಜರುಗಲಿದೆ. ರಕ್ತದಾನ ಮಾಡಿದ ಎಲ್ಲ ರಕ್ತದಾನಿಗಳಿಗೂ ಶಿಬಿರಾರ್ಥ ಪತ್ರ ದೊರಕಲಿದೆ ಎಂದು ಬ್ಲಡ್ ಡೋನರ್ಸ್ ಮಂಗಳೂರು ಹಾಗೂ ಡಿ ಗ್ರೂಪ್ ವಿಟ್ಲ ಇದರ ಸಂಘಟಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News