×
Ad

ಮೊದಲ ಟ್ವೆಂಟಿ-20: ಭಾರತ ಬ್ಯಾಟಿಂಗ್

Update: 2017-12-20 18:42 IST

ಕಟಕ್, ಡಿ.20: ಭಾರತ ವಿರುದ್ಧದ ಮೊದಲ ಟ್ವೆಂಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಟಾಸ್ ಜಯಿಸಿರುವ ಶ್ರೀಲಂಕಾ ತಂಡ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.

ಈಗಾಗಲೇ ಟೆಸ್ಟ್ ಹಾಗೂ ಏಕದಿನ ಸರಣಿ ಸೋತಿರುವ ಶ್ರೀಲಂಕಾ ಬುಧವಾರ ಮೂರು ಪಂದ್ಯಗಳ ಟ್ವೆಂಟಿ-20 ಸರಣಿಯ ಮೊದಲ ಪಂದ್ಯವನ್ನು ಆಡಲಿದೆ.

ಭಾರತ ತಂಡ ಶಿಖರ್ ಧವನ್‌ಗೆ ವಿಶ್ರಾಂತಿ ನೀಡಿ ಕೆ.ಎಲ್. ರಾಹುಲ್‌ಗೆ ಅವಕಾಶ ನೀಡಿದೆ. ಭುವನೇಶ್ವರ ಕುಮಾರ್ ಬದಲಿಗೆ ಜೈದೇವ್ ಉನದ್ಕಟ್ ಆಡುವ 11ರ ಬಳಗ ಸೇರಿಕೊಂಡಿದ್ದಾರೆ.

ಶ್ರೀಲಂಕಾ ತಂಡದಲ್ಲಿ ವೇಗಿ ವಿಶ್ವ ಫೆರ್ನಾಂಡೊ ಚೊಚ್ಚಲ ಪಂದ್ಯ ಆಡಲಿದ್ದು, ದುಶ್ಮಂತ್ ಚಾಮೀರ ಹಾಗೂ ಶನಕ ತಂಡದ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News