ಭೂಗತ ಪಾತಕಿ ರವಿ ಪೂಜಾರಿ ಬೆದರಿಕೆ ಪ್ರಕರಣ: ತನಿಖೆ ಚುರುಕುಗೊಳಿಸಿದ ಪೊಲೀಸರು
Update: 2017-12-20 18:43 IST
ಬೆಂಗಳೂರು, ಡಿ.20: ಭೂಗತ ಪಾತಕಿ ರವಿ ಪೂಜಾರಿ ಬಿಬಿಎಂಪಿ ವಾರ್ಡ್ ಮಟ್ಟದ ಕಾಮಗಾರಿ ಸ್ಥಾಯಿ ಸಮಿತಿ ಅಧ್ಯಕ್ಷ ಇಮ್ರಾನ್ ಪಾಷಾ ಅವರಿಗೆ ಜೀವ ಬೆದರಿಕೆ ಹಾಕಿರುವ ಆರೋಪ ಪ್ರಕರಣ ಸಂಬಂಧ ಜೆಜೆ ನಗರ ಠಾಣಾ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಇಮ್ರಾನ್ ಪಾಷಾ ಅವರಿಗೆ ರವಿ ಪೂಜಾರಿ ದೂರವಾಣಿ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದರು ಎನ್ನುವ ಆರೋಪದ ಮೇಲೆ ಜೆಜೆ ನಗರ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿತ್ತು. ಈ ಸಂಬಂಧ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಪ್ರಕರಣದ ಹಿನ್ನಲೆ: ಸಮಾಜಸೇವೆಯಲ್ಲಿ ಗುರುತಿಸಿಕೊಂಡಿರುವ ನನಗೆ ನ.10 ಮತ್ತು 11ರಂದು +60176206085 ಮತ್ತು +301 ದೂರವಾಣಿಯಿಂದ ಕರೆ ಮಾಡಿದ ವ್ಯಕ್ತಿ ನಾನು ರವಿ ಪೂಜಾರಿ ಎಂದು ಪರಿಚಯಿಸಿಕೊಂಡು ಜೀವ ಬೆದರಿಕೆ ಹಾಕಿದ್ದಾನೆಂದು ಇಮ್ರಾನ್ ಪಾಷ ದೂರು ನೀಡಿ ನನಗೆ ಮತ್ತು ನನ್ನ ಕುಟುಂಬಕ್ಕೆ ಅಪಾಯವಿರುವ ಹಿನ್ನೆಲೆಯಲ್ಲಿ ಸೂಕ್ತ ರಕ್ಷಣೆ ನೀಡಬೇಕೆಂದು ಪಾಷಾ ಮನವಿ ಮಾಡಿಕೊಂಡಿದ್ದರು.