×
Ad

ಮರಳು ಪೂರೈಕೆಗೆ ಆನ್‌ಲೈನ್ ಮೂಲಕ ಅರ್ಜಿ: ಶಿವಮೊಗ್ಗ ಡಿಸಿ

Update: 2017-12-20 20:02 IST

ಶಿವಮೊಗ್ಗ, ಡಿ. 20: ಸಾರ್ವಜನಿಕರಿಗೆ ಸುಲಭವಾಗಿ ಮರಳು ಸಿಗುವಂತಾಗಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಎಂ.ಲೋಕೇಶ್ ಅವರು ತಿಳಿಸಿದ್ದಾರೆ.

 ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಸಭೆಯಲ್ಲಿ ಮಾತನಾಡಿ ಅವರು, ಮೊದಲು ಬಂದವರಿಗೆ ಮೊದಲ ಆದ್ಯತೆ ಆಧಾರದಲ್ಲಿ ಸಾರ್ವಜನಿಕರಿಗೆ ಮರಳನ್ನು ಒದಗಿಸಲು ವ್ಯವಸ್ಥೆ ಮಾಡಲಾಗುವುದು. ಇದಕ್ಕಾಗಿ ಸಾಫ್ ್ಟವೇರ್ ಸಿದ್ಧವಿದ್ದು, ಆದಷ್ಟು ಬೇಗನೆ ಪ್ರಾಯೋಗಿಕವಾಗಿ ಜಿಲ್ಲೆಯ ಎಲ್ಲ್ಲ ತಾಲೂಕುಗಳಲ್ಲಿ ಆರಂಭಿಸಲಾಗುವುದು ಎಂದು ಹೇಳಿದರು.

ಪ್ರತಿ ತಾಲೂಕಿನಲ್ಲಿರುವ ಲೋಕೋಪಯೋಗಿ ಇಲಾಖೆ ಕಚೇರಿಯಲ್ಲಿ ಇದಕ್ಕಾಗಿ ಕೌಂಟರ್ ತೆರೆಯಲಾಗುವುದು. ಮರಳು ಅಗತ್ಯವಿರುವವರು ಈ ಕೇಂದ್ರಕ್ಕೆ ಬಂದು ತಮಗೆ ಬೇಕಾಗಿರುವ ಮರಳಿನ ಪ್ರಮಾಣ ಇತ್ಯಾದಿ ಮಾಹಿತಿಯನ್ನು ಅಗತ್ಯ ದಾಖಲೆಗಳೊಂದಿಗೆ ಒದಗಿಸಬೇಕು. ಆನ್‌ಲೈನ್ ಮೂಲಕ ಸಹ ಈ ರೀತಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು. ಆನ್‌ಲೈನ್ ವಿಳಾಸದ ಮಾಹಿತಿಯನ್ನು ಆದಷ್ಟು ಬೇಗನೆ ಜಾಹೀರುಪಡಿಸಲಾಗುವುದು ಎಂದರು.

ಪ್ರತಿ ತಾಲೂಕಿನಲ್ಲಿ ಒಂದು ವಾರದ ಒಳಗಾಗಿ ಕೌಂಟರ್ ಆರಂಭಿಸುವಂತೆ ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.

ಆಯಾ ತಾಲೂಕಿನ ಮರಳು ಬ್ಲಾಕಿಗೆ ನಿಗದಿಪಡಿಸಿರುವ ದರವನ್ನು ವಿಧಿಸಲಾಗುವುದು. ಮರಳು ಬ್ಲಾಕಿನಿಂದ ದೂರಕ್ಕೆ ಅನುಗುಣವಾಗಿ ಸಾಗಾಟ ವೆಚ್ಚವನ್ನು ಅಂತಿಮಪಡಿಸಿ ನೀಡಲು ಸಾರಿಗೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಜಪ್ತಿ ಮಾಡಿದ ಮರಳಿನ ಮಾಹಿತಿ ನೀಡಲು ಸೂಚನೆ: ಜಿಲ್ಲೆಯಲ್ಲಿ ಕಳೆದ ಕೆಲವು ತಿಂಗಳಲ್ಲಿ ಜಪ್ತಿ ಮಾಡಲಾಗಿರುವ ಮರಳಿನ ಪ್ರಮಾಣದ ವರದಿಯನ್ನು ತಾಲೂಕುವಾರು ಸಲ್ಲಿಸಬೇಕು. ಆಶ್ರಯ ಮನೆ ನಿರ್ಮಾಣಕ್ಕಾಗಿ ಹಾಗೂ ಸರಕಾರಿ ಕಾಮಗಾರಿಗಳಿಗೆ ಈ ಮರಳನ್ನು ಸರಕಾರ ನಿಗದಿಪಡಿಸಿದ ದರದಲ್ಲಿ ನೀಡಲು ಕ್ರಮ ಕೈಗೊಳ್ಳಬೇಕು. ಆಶ್ರಯ ಮನೆಗಳಿಗೆ ಅಗತ್ಯವಿರುವ ಮರಳಿನ ಪ್ರಮಾಣದ ಬಗ್ಗೆ ಗ್ರಾಮ ಪಂಚಾಯತ್ ಪಿಡಿಒ ಅಥವಾ ತಾಲೂಕು ಕಾರ್ಯನಿರ್ವಹಣಾಧಿಕಾರಿ ಅವರು ಪತ್ರ ನೀಡಿದರೆ ತಕ್ಷಣ ಒದಗಿಸಲಾಗುವುದು ಎಂದು ಅವರು ಹೇಳಿದರು.

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ದೊರೆತ ತಕ್ಷಣ ನೇರವಾಗಿ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ನೇರವಾಗಿ ಮಾಹಿತಿಯನ್ನು ಒದಗಿಸುವಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ತಿಳಿಸಿದರು.

ತಾಲೂಕು ಮಟ್ಟದಲ್ಲಿ ರಚಿಸಲಾಗಿರುವ ಕಾರ್ಯಪಡೆ ಆಗಾಗ್ಗೆ ಸಭೆ ಸೇರಿ ಮರಳು ಸಾಗಾಟ, ಅಕ್ರಮಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು. ಉಪವಿಭಾಗ ಮಟ್ಟದಲ್ಲಿ ಉಪವಿಭಾಗಾಧಿಕಾರಿಗಳು ಸಭೆಯನ್ನು ನಡೆಸಬೇಕು. ಈ ಸಭೆಯಲ್ಲಿ ಗಣಿ ಮತ್ತು ಭೂ ವಿಜ್ಞ್ಞಾನ ಅಧಿಕಾರಿಗಳು ಭಾಗವಹಿಸಬೇಕು ಎಂದು ಅವರು ಹೇಳಿದರು.

ತೀರ್ಥಹಳ್ಳಿ ತಾಲೂಕಿನ ಬಗ್ಗೋಡಿನಲ್ಲಿರುವ ಸಾಮಾನ್ಯ ಮರಳು ಬ್ಲಾಕ್‌ನಿಂದ ದಿನನಿತ್ಯ ಸಾಗಾಟಕ್ಕೆ ಅನುಮತಿ ನೀಡಲಾಗಿರುವ ವಾಹನಗಳ ಸಂಖ್ಯೆಯನ್ನು ಹೆಚ್ಚಿಸಲಾಗುವುದು. ಈ ಭಾಗದಲ್ಲಿ ಮರಳುಗಾರಿಕೆಗೆ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಅವರು ಸೂಚನೆ ನೀಡಿದರು.

ಎಸ್ಪಿ ಅಭಿನವ ಖರೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಕೇಶ್ ಕುಮಾರ್, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ, ಹಿರಿಯ ಭೂವಿಜ್ಞಾನಿ ರಶ್ಮಿ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮರಳಿಗಾಗಿ ಅರ್ಜಿ ಸಲ್ಲಿಸಿರುವ ಗ್ರಾಹಕರ ದೃಢೀಕರಣಕ್ಕಾಗಿ ಆಧಾರ್ ಸಂಖ್ಯೆ ಅಥವಾ ಅವರ ಮೊಬೈಲ್‌ಗೆ ಒಟಿಪಿ ಕಳುಹಿಸಿ ದೃಢೀಕರಿಸಲಾಗುವುದು. ಬಳಿಕ ಸಂಬಂಧಪಟ್ಟ ತಾಲೂಕಿನಲ್ಲಿ ಈಗಾಗಲೇ ಜಿಪಿಎಸ್ ಅಳವಡಿಸಲಾಗಿರುವ ಲಾರಿ ನಿರ್ವಾಹಕರಿಗೆ ಸರದಿ ಪ್ರಕಾರ ಹಾಗೂ ಮರಳು ಪೂರೈಕೆದಾರರಿಗೆ ಪೂರೈಸಬೇಕಾದ ಮರಳಿನ ಪ್ರಮಾಣ ಹಾಗೂ ಮರಳು ತಲುಪಿಸಬೇಕಾಗಿರುವ ವಿಳಾಸದ ವಿವರನ್ನು ಕಳುಹಿಸಲಾಗುವುದು.

-ಡಾ.ಎಂ.ಲೋಕೇಶ್, ಡಿಸಿ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News