×
Ad

ಒತ್ತುವರಿ ಭೂಮಿಯಲ್ಲಿ ಹನುಮನ ಮೂರ್ತಿ ಪ್ರತಿಷ್ಠಾಪನೆ

Update: 2017-12-20 21:46 IST

ಹೊಸದಿಲ್ಲಿ, ಡಿ.20: ದಿಲ್ಲಿಯ ಕರೋಲ್‌ಬಾಗ್ ಪ್ರದೇಶದಲ್ಲಿ ಸರಕಾರಿ ಜಮೀನನ್ನು ಒತ್ತುವರಿ ಮಾಡಿ 108 ಅಡಿ ಎತ್ತರದ ಹನುಮಾನ್ ವಿಗ್ರಹ ಪ್ರತಿಷ್ಠಾಪಿಸಿರುವ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ದಿಲ್ಲಿ ಹೈಕೋರ್ಟ್ ಸಿಬಿಐಗೆ ಸೂಚಿಸಿದೆ.

ಕರೋಲ್‌ಭಾಗ್ ಪ್ರದೇಶದಲ್ಲಿರುವ ಅಕ್ರಮ ನಿರ್ಮಾಣ ಹಾಗೂ ಒತ್ತುವರಿಗಳನ್ನು ತೆರವುಗೊಳಿಸಬೇಕೆಂದು ಕೋರಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್‌ನ ಪ್ರಭಾರ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್ ಹಾಗೂ ನ್ಯಾಯಮೂರ್ತಿ ಸಿ.ಹರಿಶಂಕರ್ ಅವರಿದ್ದ ನ್ಯಾಯಪೀಠ ಈ ಸೂಚನೆ ನೀಡಿದೆ.

ಹನುಮಾನ್ ವಿಗ್ರಹ ಪ್ರತಿಷ್ಟಾಪನೆಯಾಗಿರುವ ಪ್ರದೇಶ ಯಾವ ಅಧಿಕಾರಿಯ ವ್ಯಾಪ್ತಿಗೆ ಬರುತ್ತದೆ ಎಂಬುದನ್ನು ತಿಳಿದುಕೊಂಡು ಆ ಅಧಿಕಾರಿಯ ವಿರುದ್ಧ ಕ್ರಮ ಜರಗಿಸುವಂತೆ ಸಿಬಿಐಗೆ ಸೂಚಿಸಿದೆ ಹಾಗೂ ಹನುಮಾನ್ ವಿಗ್ರಹವನ್ನು ತೆರವುಗೊಳಿಸುವ ಬಗ್ಗೆ ಪರಿಶೀಲಿಸುವಂತೆ ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News