×
Ad

ಬೋಧನಾ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮ

Update: 2017-12-20 22:23 IST

ಶಿರ್ವ, ಡಿ.20: ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲ ಯದ ಐಎಸ್‌ಟಿಇ ಬೋಧಕ ಘಟಕದ ಆಶ್ರಯದಲ್ಲಿ ಮೂರು ದಿನಗಳ ಬೋಧನಾ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮವನ್ನು ಇತ್ತೀಚೆಗೆ ಸಂಸ್ಥೆಯಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮವನ್ನು ಮಂಗಳೂರಿನ ಅಭಿಯಾನಂನ ನಿರ್ದೇಶಕರಾದ ಡಾ. ಶಿಕಾರಿಪುರ ಕೃಷ್ಣಮೂರ್ತಿ ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಸಂಸ್ಥೆಯ ಕಾರ್ಯ ದರ್ಶಿ ರತ್ನಕುಮಾರ್ ವಹಿಸಿದ್ದರು. ಸಂಸ್ಥೆಯ ಪ್ರಾಂಶುಪಾಲ ಪ್ರೊ.ತಿರುುಲೇಶ್ವರ ಭಟ್ ಉಪಸ್ಥಿತರಿದ್ದರು.

ಮೂರು ದಿನಗಳ ಕಾರ್ಯಾಗಾರದಲ್ಲಿ ಮಂಗಳೂರಿನ ಸಂತ ಆಗ್ನೆಸ್ ಮಹಾ ವಿದ್ಯಾಲಯದ ಆಂಗ್ಲಭಾಷಾ ವಿಭಾಗದ ಮುಖ್ಯಸ್ಥೆ ಡಾ.ಮಾಲಿನಿ ಹೆಬ್ಬಾರ್, ಧಾರವಾಡದ ಸಿ-ಡಾಸ್‌ನ ಮಾಜಿ ನಿರ್ದೇಶಕ ಸಿ.ಎಸ್.ಆನಂದ್, ಉಡುಪಿ ಬಾಳಿಗಾ ಆಸ್ಪತ್ರೆಯ ಹಿರಿಯ ಮನೋವೈದ್ಯರಾದ ಡಾ.ವಿರೂಪಾಕ್ಷ ದೇವರ ಮನೆ, ಮಂಗಳೂರಿನ ಸಹ್ಯಾದ್ರಿ ತಾಂತ್ರಿಕ ಮಹಾವಿದ್ಯಾಲಯದ ಉದ್ಯೋಗ ಮತ್ತು ತರಬೇತಿ ವಿಭಾಗದ ಮುಖ್ಯಸ್ಥ ರಶ್ಮಿ ಭಂಡಾರಿ, ಜಿಂದಾಲ್ ಕಂಪನಿಯ ಮಾಜಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಇನ್ನ ಚಂದ್ರಕಾಂತ್ ರಾವ್, ಸಿಂಡಿಕೇಟ್ ಬ್ಯಾಂಕಿನ ನಿವೃತ್ತ ಹಿರಿಯ ಮಹಾ ಪ್ರಬಂಧಕ ದೇವಾನಂದ್ ಉಪಾಧ್ಯಾಯ ಉಪನ್ಯಾಸ ನೀಡಿದರು.

ಸಂಸ್ಥೆಯ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ.ರೀನಾ ಕುಮಾರಿ ಪಿ. ಡಿ., ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕ ಚೇತನ್ ಆರ್. ಕಾರ್ಯಕ್ರಮವನ್ನು ಸಂಯೋಜಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News