ವಿಕಾಸ್ ಕಾಲೇಜಿನಲ್ಲಿ ಡಾ.ಸಜ್ಜನ್ ಮಡಪ್ಪಾಡಿಯವರಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ
Update: 2017-12-20 22:45 IST
ಮಂಗಳೂರು, ಡಿ. 20: ರೋಟರಿ ಕ್ಲಬ್ ಮಂಗಳೂರು ಸೆಂಟ್ರಲ್ ಹಾಗೂ ಡೈನಾಮಿಕ್ ಹೆಲ್ತ್ ಆ್ಯಂಡ್ ಎಜುಕೇಶನ್ ಫೌಂಡೇಶನ್ ವತಿಯಿಂದ ಎ.ಜೆ.ಮೆಡಿಕಲ್ ಕಾಲೇಜಿನ ಅಸಿಸ್ಟಂಟ್ ಪ್ರೊಫೆಸರ್ ರೊಟೇರಿಯನ್ ಡಾ. ಸಜ್ಜನ್ ಮಡಪ್ಪಾಡಿ ಅವರು ನಗರದ ವಿಕಾಸ್ ಕಾಲೇಜಿನ ಪಿಯುಸಿ ವಿದ್ಯಾರ್ಥಿಗಳಿಗೆ ವೈದ್ಯಕೀಯ ಮತ್ತು ಇತರ ಶಿಕ್ಷಣದ ಬಗ್ಗೆ ಮಾರ್ಗದರ್ಶನ ನೀಡಿದರು.
ಸಂಸ್ಥೆಯ ಮುಖ್ಯಸ್ಥ ಡಾ. ಶ್ರೀಪತಿ ರಾವ್ ಸ್ವಾಗತಿಸಿದರು. ವೈದ್ಯಕೀಯ ಶಿಕ್ಷಣ ಮಾರ್ಗದರ್ಶನದ ಬಗ್ಗೆ ಪ್ರಯೋಜನ ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾಲೇಜಿನ ಸುಮಾರು 350 ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಡೈನಾಮಿಕ್ ಹೆಲ್ತ್ ಆ್ಯಂಡ್ ಎಜುಕೇಶನ್ ಸಂಸ್ಥೆಯ ನಿರ್ದೇಶಕ ರಾಧಾಕೃಷ್ಣ ಅವರು ಉಪಸ್ಥಿತರಿದ್ದರು.