ಅರ್ಜಿ ಆಹ್ವಾನ

Update: 2017-12-20 18:31 GMT

2017-18ನೇ ಸಾಲಿನಲ್ಲಿ ಪೂರ್ಣಾವಧಿ ಪಿಎಚ್.ಡಿ. ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, 3ಬಿ ಹಾಗೂ ಇತರ ಒಬಿಸಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಗೆ ಇಲಾಖೆಯಿಂದ ನೀಡುವ ಮಾಸಿಕ ರೂ.5,000 ವ್ಯಾಸಂಗ ವೇತನ/ಫೆಲೋಶಿಪ್ ಹಾಗೂ ನಿಗದಿತ ಶುಲ್ಕ ವಿನಾಯ್ತಿಗಾಗಿ ಈ ಹಿಂದೆ ಆಯ್ಕೆಯಾಗಿದ್ದು, ಪ್ರಸ್ತುತ ಸಾಲಿನಲ್ಲಿ ಮುಂದುವರಿಯುತ್ತಿರುವ ಅರ್ಹ ನವೀಕರಣ ವಿದ್ಯಾರ್ಥಿಗಳು ಹಾಗೂ 2017ರ ಎಪ್ರಿಲ್ 1 ರಿಂದೀಚೆಗೆ ಪ್ರಥಮ ವರ್ಷದಲ್ಲಿ ಪೂರ್ಣಾವಧಿ ಪಿಎಚ್.ಡಿ. ಅಧ್ಯಯನದಲ್ಲಿ ತೊಡಗಿರುವ ವಿದ್ಯಾರ್ಥಿಗಳಿಂದ ಈ ಮೊದಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. 2017ರ ಎ.1ರಿಂದ ಹಿಂದೆ ಪೂರ್ಣಾವಧಿ ಪಿಎಚ್.ಡಿ. ಅಧ್ಯಯನದಲ್ಲಿ ತೊಡಗಿರುವ ಪ್ರಥಮ ವರ್ಷದ ವಿದ್ಯಾರ್ಥಿಗಳು ಸಹ ಈಗ ಅರ್ಜಿ ಸಲ್ಲಿಸಬಹುದಾಗಿದೆ.

ಅದೇ ರೀತಿ 2, 3 ಮತ್ತು 4ನೇ ವರ್ಷದಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಈ ಮೊದಲು ಈ ಕಾರ್ಯಕ್ರಮದಡಿ ಅರ್ಜಿ ಸಲ್ಲಿಸದಿದ್ದಲ್ಲಿ, ಈಗ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ದಿನಾಂಕವನ್ನು ಡಿ.23ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ವಿವರಗಳಿಗಾಗಿ ಇಲಾಖಾ ವೆಬ್‌ಸೈಟ್ www.backwardclasses.kar.nic.in ಅನ್ನು ನೋಡಬಹುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News