ಚಿಕ್ಕಮಗಳೂರು : ಅತ್ಯಾಚಾರ ಎಸಗಿದ ಆರೋಪಿಗೆ ಜೈಲು ಶಿಕ್ಷೆ
Update: 2017-12-21 19:22 IST
ಚಿಕ್ಕಮಗಳೂರು, ಡಿ.21: ಬುದ್ದಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ ನಗರದ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯವು ಕಠಿಣ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.
2013 ಆ.3ರಂದು ಸಿಂಗಟರೆಗೆಯ ಠಾಣಾ ವ್ಯಾಪ್ತಿಯಲ್ಲಿ ಬುದ್ದಿಮಾಂದ್ಯ ಮಹಿಳೆಯ ಮೇಲೆ ಆರೋಪಿ ಎಂ.ಪಿ ಸಿದ್ದಪ್ಪ ಅತ್ಯಾಚಾರ ಎಸಗಿದ್ದ. ಈ ಹಿನ್ನೆಲೆ ಸಿಂಗಟಗೆರೆ ಠಾಣಾ ಪೊಲೀಸರು ಆರೋಪಿಯ ವಿರುದ್ಧ ಐಪಿಸಿ ಕಲಂ 450, 376(2)(ಎಲ್) ಹಾಗೂ 506ರ ಅಡಿಯ ಅಪರಾಧಕ್ಕೆ ಪ್ರಕರಣ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿದ್ದರು.
ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಪ್ರಭಾವತಿ ಎಂ. ಹಿರೇಮಠ್ ಅವರು ಆರೋಪಿ ಎಂ.ಪಿ. ಸಿದ್ದಪಪ್ಪನಿಗೆ ಐಪಿಸಿ ಕಲಂ 376(2)(1)ರ ಅಪರಾಧಕ್ಕೆ 10 ವರ್ಷ ಕಠಿಣ ಶಿಕ್ಷೆ ಹಾಗೂ ರೂ. 10000 ದಂಡ ವಿಧಿಸಿ ತೀರ್ಪು ನೀಡಿದ್ದಾರೆ.
ಸರಕಾರದ ಪರವಾಗಿ ಸರಕಾರಿ ಅಭಿಯೋಜಕರಾದ ಯು. ಶ್ರೀನಿವಾಸ ಹೆಗ್ಡೆ ವಾದ ಮಂಡಿಸಿದ್ದರು.