×
Ad

ಸಕ್ಕರೆ ಕಾರ್ಖಾನೆಯ ಬಾಯ್ಲರ್ ಸ್ಫೋಟ: ಐವರು ಸಾವು

Update: 2017-12-21 19:33 IST

ಪಾಟ್ನಾ, ಡಿ. 21: ಬಿಹಾರದ ಗೋಪಾಲಗಂಜ್ ಜಿಲ್ಲೆಯಲ್ಲಿ ಸಕ್ಕರೆ ಕಾರ್ಖಾನೆಯ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಕನಿಷ್ಠ ಐವರು ಮೃತಪಟ್ಟಿದ್ದಾರೆ ಹಾಗೂ 9 ಮಂದಿ ಗಾಯಗೊಂಡಿದ್ದಾರೆ.

ಗಂಭೀರ ಗಾಯಗೊಂಡ ಮೂವರನ್ನು ಪಾಟ್ನಾ ವೈದ್ಯಕೀಯ ಕಾಲೇಜು ಹಾಗೂ ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ಹಿಂದೆ ನವೆಂಬರ್‌ನಲ್ಲಿ ಉತ್ತರಪ್ರದೇಶದ ರಾಯ್‌ಬರೇಲಿಯಲ್ಲಿ ಸಕ್ಕರೆ ಕಾರ್ಖಾನೆಯ ಬಾಯ್ಲರ್ ಸ್ಫೋಟಗೊಂಡು 46 ಮಂದಿ ಮೃತಪಟ್ಟಿದ್ದರು.

ಗೋಪಾಲಗಂಜ್ ಜಿಲ್ಲೆಯ ಸಾಸಾ ಮೌಸಾ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಮಧ್ಯರಾತ್ರಿ ಸವೆದ ಬಾಯ್ಲರ್ ಸ್ಪೋಟಗೊಂಡಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಬಾಯ್ಲರ್ ಸ್ಫೋಟಕ್ಕೆ ಕಾರಣ ಇದುವರೆಗೆ ತಿಳಿದುಬಂದಿಲ್ಲ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News