ಡಿ.26: ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಬೃಹತ್ ಸಮಾವೇಶ
Update: 2017-12-21 20:19 IST
ಉಡುಪಿ, ಡಿ.21: ಜಿಲ್ಲಾ ಯುವ ಕಾಂಗ್ರೆಸ್ ಸಮಾವೇಶ ಡಿ.26ರಂದು ಮಂಗಳವಾರ ಕಾಪು ಜನಾರ್ದನ ದೇವಸ್ಥಾನದ ಎದುರಿನ ಮೈದಾನದಲ್ಲಿ ಅಪರಾಹ್ನ 3 ಗಂಟೆಗೆ ನಡೆಯಲಿದೆ. ಸಭೆಗೆ ಪೂರ್ವಭಾವಿಯಾಗಿ ಕಾಪು ರಾಜೀವ ಭವನದಿಂದ ಕಾರ್ಯಕರ್ತರ ಮೆರವಣಿಗೆ ನಡೆಯಲಿದೆ.
ಸಮಾವೇಶವನ್ನು ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್ ಉದ್ಘಾಟಿಸುವರು. ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್, ಕಾಪು ಶಾಸಕ ವಿನಯಕುಮಾರ್ ಸೊರಕೆ, ಕೆಎಸ್ಸಾರ್ಟಿಸಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಗೋಪಾಲ ಪೂಜಾರಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜನಾರ್ದನ ತೋನ್ಸೆ, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪಚಂದ್ರ ಶೆಟ್ಟಿ ಮತ್ತು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಬಸವನಗೌಡ ಬಾದರ್ಲಿ, ಮಾಜಿ ಶಾಸಕ ಗೋಪಾಲ ಭಂಡಾರಿ ಭಾಗವಹಿಸುವರು ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಅಮೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.