ಸಹೋದರನನ್ನು ಪ್ರಧಾನಿ ಅಭ್ಯರ್ಥಿಯಾಗಿ ನೇಮಿಸಿದ ಶರೀಫ್

Update: 2017-12-21 17:43 GMT

ಇಸ್ಲಾಮಾಬಾದ್, ಡಿ. 21: 2018ರ ಸಂಸದೀಯ ಚುನಾವಣೆಯಲ್ಲಿ ತನ್ನ ತಮ್ಮ ಹಾಗೂ ಪಂಜಾಬ್‌ ಮುಖ್ಯಮಂತ್ರಿ ಶೆಹ್ಬಾಝ್ ಶರೀಫ್ ಪಕ್ಷದ ಪ್ರಧಾನಿ ಅಭ್ಯರ್ಥಿಯಾಗಿರುತ್ತಾರೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ ಪಾಕಿಸ್ತಾನ ಮುಸ್ಲಿಮ್ ಲೀಗ್ (ಎನ್) (ಪಿಎಂಎಲ್-ಎನ್) ಮುಖ್ಯಸ್ಥ ನವಾಝ್ ಶರೀಫ್ ಘೋಷಿಸಿದ್ದಾರೆ.

ತನ್ನ ನಿವಾಸದಲ್ಲಿ ಬುಧವಾರ ರಾತ್ರಿ ನಡೆದ ಆಡಳಿತಾರೂಢ ಪಕ್ಷದ ಹಿರಿಯ ನಾಯಕರ ಸಭೆಯಲ್ಲಿ ಶರೀಫ್ ಈ ಘೋಷಣೆ ಮಾಡಿದರು.

ನವಾಝ್ ಶರೀಫ್ ಕುಟುಂಬದ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿ ಪಾಕಿಸ್ತಾನದ ಸುಪ್ರೀಂ ಕೋರ್ಟ್ ಜುಲೈ ತಿಂಗಳಲ್ಲಿ ಅವರನ್ನು ಪ್ರಧಾನಿ ಹುದ್ದೆಯಿಂದ ಅನರ್ಹಗೊಳಿಸಿರುವುದನ್ನು ಸ್ಮರಿಸಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News