×
Ad

ಮಂಗಳೂರು: ದುಷ್ಕರ್ಮಿಗಳ ಬಂಧಿಸಿ, ಕಠಿಣ ಶಿಕ್ಷೆಗೆ ಒತ್ತಾಯಿಸಿ ಎಸ್‌ಡಿಪಿಐ ಪ್ರತಿಭಟನೆ

Update: 2017-12-21 23:34 IST

ಮಂಗಳೂರು, ಡಿ. 21: ಬಿಜಾಪುರದ ಜಯಪುರದಲ್ಲಿ ದಲಿತ ಸಮುದಾಯದ ವಿದ್ಯಾರ್ಥಿನಿಯನ್ನು ಅತ್ಯಾಚಾರಗೈದು, ಹತ್ಯೆಗೈದ ದುಷ್ಕರ್ಮಿಗಳನ್ನು ಬಂಧಿಸುವಂತೆ ಆಗ್ರಹಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ದ.ಕ. ಜಿಲ್ಲಾ ಸಮಿತಿಯಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಿತು.

ವಿದ್ಯಾರ್ಥಿನಿಯೊಬ್ಬಳ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರವನ್ನು ಎಸಗಿ, ಕೊಲೆ ಮಾಡಿರುವುದು ನೀಚ ಕೃತ್ಯವಾಗಿದ್ದು, ಆರೋಪಿಗಳನ್ನು ಬಂಧಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪ್ರತಿಭಟನೆಯಲ್ಲಿ ಆಗ್ರಹಿಸಲಾಯಿತು.

ಅಲ್ಲದೆ, ವಿದ್ಯಾರ್ಥಿನಿಯ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಒತ್ತಾಯಿಸಲಾಯಿತು. ಕಾರ್ಯಕ್ರಮದಲ್ಲಿ ಎಸ್‌ಡಿಪಿಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎ.ಎಂ. ಅಥಾವುಲ್ಲಾ, ಕಾರ್ಯದರ್ಶಿ ಇಕ್ಬಾಲ್ ಬೆಳ್ಳಾರೆ, ರಾಜ್ಯ ಕಾರ್ಯದರ್ಶಿ ಅಕ್ರಮ್ ಅಸನ್, ದಸಂಸದ ರಾಕೆಶ್ ಕೆನ್ಜಾರ್, ಅಶ್ರಫ್ ಮಂಚಿ ಪ್ರತಿಭಟನೆ ಯನ್ನುದ್ದೇಶಿಸಿ ಮಾತನಾಡಿದರು. ಹಾರಿಸ್ ಮಲಾರ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News