×
Ad

ಡಿ. 23: ಅಡ್ಡೂರು ಸರಕಾರಿ ಶಾಲೆಯ 'ಸುವರ್ಣ ಮಹೋತ್ಸವ'

Update: 2017-12-22 17:11 IST

ಅಡ್ಡೂರು, ಡಿ. 22: ಇಲ್ಲಿನ ದ.ಕ.ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯ 50ನೇ ವರ್ಷಾಚರಣೆಯ ಪ್ರಯುಕ್ತ ಶಾಲಾಭಿವೃದ್ಧಿ-ಮೇಲುಸ್ತುವಾರಿ ಸಮಿತಿ, ಹಿತರಕ್ಷಣಾ ಸಮಿತಿ ಹಾಗೂ ಹಳೆ ವಿದ್ಯಾರ್ಥಿಗಳ ಸಂಘದ ಸಂಯುಕ್ತಾಶ್ರಯದಲ್ಲಿ ಡಿ.23ರಂದು 'ಸುವರ್ಣ ಮಹೋತ್ಸವ ಮತ್ತು ಮಕ್ಕಳ ಪ್ರತಿಭಾ ಪುಸ್ಕಾರ, ಸಾಂಸ್ಕೃತಿಕ ಕಾರ್ಯಕ್ರಮ' ವನ್ನು ಶಾಲಾ ವಠಾರದಲ್ಲಿ ಆಯೋಜಿಸಲಾಗಿದೆ.

ಅಂದು ಬೆಳಗ್ಗೆ 9.30ಕ್ಕೆ ನಡೆಯುವ ಕಾರ್ಯಕ್ರಮವನ್ನು ಗುರುಪುರ ಗ್ರಾ.ಪಂ.ಅಧ್ಯಕ್ಷೆ ರುಕಿಯಾ ಉದ್ಘಾಟಿಸಲಿದ್ದು, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಿದ್ದೀಕ್ ಕೆಳಗಿನಕೆರೆ ಅಧ್ಯಕ್ಷತೆ ವಹಿಸಲಿದ್ದಾರೆ. ಈ ವೇಳೆ ಶಾಲಾ ಕಟ್ಟಡ ನಿರ್ಮಾಣಕ್ಕೆ ಸ್ಥಳದಾನ ನೀಡಿದ ಹರ್ಷ ಕಡಂಬಾರು ಹಾಗೂ ಸಮೂಹ ಸಂಪನ್ಮೂಲ ವ್ಯಕ್ತಿ ಉಷಾ ಕುಮಾರಿ ಅವರನ್ನು ಸನ್ಮಾನಿಸಲಾಗುವುದು.

ಬಳಿಕ ಸಂಜೆ 6.30ಕ್ಕೆ ನಡೆಯಲಿರುವ ಸಮಾರೋಪ ಸಮಾರಂಭದ ಉದ್ಘಾಟನೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಎ.ಕೆ.ರಿಯಾಝ್ ನೆರವೇರಿಸಲಿದ್ದು, ಅಧ್ಯಕ್ಷತೆಯನ್ನು ಶಾಸಕ ಬಿ.ಎ.ಮೊಯ್ದಿನ್ ಬಾವಾ ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲೆಯ ಆರೋಗ್ಯ ಮತ್ತು ಶಿಕ್ಷಣ ಸಮಿತಿಯ ಅಧ್ಯಕ್ಷ ಸಾಹುಲ್ ಹಮೀದ್, ಜಿ.ಪಂ.ಸದಸ್ಯ ಯು.ಪಿ.ಇಬ್ರಾಹೀಂ ತಾ.ಪಂ.ಸದಸ್ಯ ಸಚಿನ್ ಅಡಪ, ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ ಸ್ಥಾಪಕ ಅಬ್ದುಲ್ ರವೂಫ್ ಪುತ್ತಿಗೆ, ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್, ಸುವರ್ಣ ಮಹೋತ್ಸವ ಸ್ವಾಗತ ಸಮಿತಿ ಅಧ್ಯಕ್ಷ ಟಿ.ಅಹ್ಮದ್ ಬಾವ ತೋಕೂರು, ಗುರುಪುರ ಗ್ರಾ.ಪಂ. ಉಪಾಧ್ಯಕ್ಷ ಜಿ.ಎಂ.ಉದಯ್ ಭಟ್,  ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಿದ್ದೀಕ್ ಕೆಳಗಿನಕೆರೆ, ಸುವರ್ಣ ಮಹೋತ್ಸವ ಸ್ವಾಗತ ಸಮಿತಿ ಉಪಾಧ್ಯಕ್ಷ ಹಮ್ಮಬ್ಬ ರೈಫಲ್, ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷ ಅಬ್ದುಲ್ ರಹಿಮಾನ್, ಬದ್ರಿಯಾ ಜುಮಾ ಮಸೀದಿಯ ಅಧ್ಯಕ್ಷ ಟಿ. ಸೈಯದ್ ತೋಕೂರು, ಕಾಂಜಿಲ ಕೋಡಿಯ ಬದ್ರುಲ್ ಹುದಾ ಮಸೀದಿಯ ಅಧ್ಯಕ್ಷ ಎ.ಅಹ್ಮದ್ ಬಾವಾ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.

ಅಕ್ಷರ ಸಂತ ಹರೇಕಳ ಹಾಜಬ್ಬ, ನಿವೃತ್ತ ಶಿಕ್ಷಕ ವಿಷ್ಣುಮೂರ್ತಿ ಪೊಳಲಿ, ನಿವೃತ್ತ ಸಹ ಶಿಕ್ಷಕಿಯರಾದ ತಾಹಿರ ಬೇಗಂ, ಗಂಗು ಟೀಚರ್, ಲಿಲ್ಲಿ ಮೇರಿ ಬರೆಟ್ಟೊ, ನಿವೃತ್ತ ಮುಖ್ಯ ಶಿಕ್ಷಕರಾದ ಧರ್ಮಣ ಶೆಟ್ಟಿಗಾರ್, ನಾಗೇಶ್ ಪೂಜಾರಿ, ನಾರಾಯಣ ಅಗರಿ, ನಿವೃತ್ತ ಮುಖ್ಯ ಶಿಕ್ಷಕಿಯರಾದ ಗಟ್ರೂಟ್, ಲೀನಾ ಸಿಕ್ವೇರಾ ಅವರನ್ನು ಇದೇ ವೇಳೆ ಸನ್ಮಾನಿಸಲಾಗುವುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News