ಮಿತ್ತೂರು ಬಳಿ ಕಾರು ಢಿಕ್ಕಿ: ಪಾದಚಾರಿ ಸ್ಥಳದಲ್ಲೇ ಮೃತ್ಯು
Update: 2017-12-22 21:06 IST
ಬಂಟ್ವಾಳ, ಡಿ. 22: ಕಾರೊಂದು ಪಾದಚಾರಿಯೊಬ್ಬರಿಗೆ ಢಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೆ ಮೃತಪಟ್ಟ ಘಟನೆ ಮಾಣಿ ಮೈಸೂರು ಹೆದ್ದಾರಿಯ ಮಿತ್ತೂರು ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಮೃತರನ್ನು ಕೆದಿಲ ಕರಿಮಜಲು ನಿವಾಸಿ ಬಾಲಕೃಷ್ಣ (33) ಎಂದು ಗುರುತುಸಲಾಗಿದೆ. ಮಾಣಿ ಕಡೆಯಿಂದ ಬರುತ್ತಿದ್ದ ಓಮ್ನಿ ಕಾರು ನಿಯಂತ್ರಣ ತಪ್ಪಿ ಮಿತ್ತೂರು ಸಮೀಪ ಪಾದಚಾರಿಗೆ ಢಿಕ್ಕಿಹೊಡೆದಿದೆ. ಪರಿಣಾಮ ಪಾದಚಾರಿ ಬಾಲಕೃಷ್ಣ ತಲೆಗೆ ಗಂಭೀರವಾಗಿ ಗಾಯವಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನಂತರ ಮುಂದೆ ಚಲಿಸಿದ ಕಾರು ಮಿತ್ತೂರು ರೈಲ್ವೆ ಸೇತುವೆ ಸಮೀಪ ರಸ್ತೆಯಲ್ಲಿ ಉರುಳಿ ಬಿದ್ದಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಘಟನೆಯಿಂದ ಓಮ್ನಿಯಲ್ಲಿದ್ದವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.