‘ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಧಾರ್ಮಿಕ ಅಲ್ಪಸಂಖ್ಯಾತರ ಸ್ಥಾನಮಾನಕ್ಕೆ ಆಗ್ರಹ’
Update: 2017-12-22 21:10 IST
ಬೆಂಗಳೂರು, ಡಿ.22: ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಧಾರ್ಮಿಕ ಅಲ್ಪಸಂಖ್ಯಾತರ ಸ್ಥಾನಮಾನ ಕಲ್ಪಿಸುವ ಸಂಬಂಧ ವರದಿ ನೀಡುವಂತೆ ರಾಜ್ಯ ಸರಕಾರವು ನ್ಯಾ.ನಾಗಮೋಹನ್‌ದಾಸ್ ನೇತೃತ್ವದಲ್ಲಿ 7 ಜನರನ್ನು ಒಳಗೊಂಡ ತಜ್ಞರ ಸಮಿತಿಯನ್ನು ರಚಿಸಿದೆ ಎಂದು ತಿಳಿದು ಬಂದಿದೆ.
ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ.ಸಿ.ಎಸ್. ದ್ವಾರಕಾನಾಥ್, ರಾಜಕೀಯ ವಿಶ್ಲೇಷಕ ಪ್ರೊ.ಮುಝಫ್ಫರ್ ಅಸ್ಸಾದಿ, ಪತ್ರಕರ್ತ ಸರಜೂ ಕಾಟ್ಕರ್, ಸಾಹಿತಿ ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಜೆಎನ್‌ಯು ಕನ್ನಡ ಅಧ್ಯಯನ ಪೀಠದ ಮುಖಸ್ಥ ಡಾ.ಪುರುಷೋತ್ತಮ್ ಬಿಳಿಮಲೆ, ಸಾಹಿತಿ ರಾಮಕೃಷ್ಣ ಮರಾಠೆ ಅವರನ್ನು ಒಳಗೊಂಡ ತಜ್ಞರ ಸಮಿತಿಯನ್ನು ರಚಿಸಲಾಗಿದ್ದು, ಒಂದು ತಿಂಗಳಲ್ಲಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ ಎನ್ನಲಾಗಿದೆ.