ಡಿ.27ಕ್ಕೆ ಉತ್ತರ ಕರ್ನಾಟಕ ಬಂದ್ ಗೆ ಕರೆ
Update: 2017-12-22 21:31 IST
ಬೆಂಗಳೂರು,ಡಿ.22: ಉತ್ತರ ಕರ್ನಾಟಕದಲ್ಲಿ ಮಹಾದಾಯಿ ನೀರಾವರಿ ಹೋರಾಟ ಮತ್ತಷ್ಟು ತೀವ್ರಗೊಂಡಿದ್ದು, ಡಿ.27 ರಂದು ಉತ್ತರ ಕರ್ನಾಟಕ ಬಂದ್ ಮಾಡಲು ಕಳಸಾ ಬಂಡೂರಿ ಮಹಾದಾಯಿ ಹೋರಾಟ ಸಮಿತಿ ಹಾಗೂ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ.
ಕುಡಿಯುವ ನೀರಿನ ವಿಚಾರದಲ್ಲಿ ರಾಜಕೀಯ ಮಾಡಬಾರದು. ವಿವಾದ ಶೀಘ್ರ ಇತ್ಯರ್ಥಗೊಳಿಸಲು ಒತ್ತಾಯಿಸಿ ಉತ್ತರ ಕರ್ನಾಟಕದ ಧಾರವಾಡ, ಗದಗ, ಬಾಗಲಕೋಟೆ, ಬೆಳಗಾವಿ ಜಿಲ್ಲೆಯಲ್ಲಿ ಬಂದ್ ಮಾಡಲಾಗುವುದು ಎಂದು ಕಳಸಾ ಬಂಡೂರಿ ಹೋರಾಟ ಸಮನ್ವಯ ಸಮಿತಿ ಸಂಚಾಲಕ ರಾಜಣ್ಣ ಕೊರವಿ ತಿಳಿಸಿದರು.