×
Ad

ಕೇರಳ ಸಚಿವ ಸಂಪುಟ ವಜಾ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಹೈಕೋರ್ಟ್

Update: 2017-12-22 21:57 IST

ಕೊಚ್ಚಿ,ಡಿ.22: ಸಾಮೂಹಿಕ ಹೊಣೆಗಾರಿಕೆಯನ್ನು ನಿರ್ವಹಿಸಲು ವಿಫಲವಾಗಿದ್ದಾರೆ ಎಂದು ಆರೋಪಿಸಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಾಗೂ ಸಚಿವ ಸಂಪುಟವನ್ನು ವಜಾಗೊಳಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. 

ಸಚಿವ ಸಂಪುಟದ ಸಭೆಯಿಂದ ಕೆಲವು ಸಚಿವರು ದೂರ ಉಳಿದಿರುವುದನ್ನು ಸಾಮೂಹಿಕ ಹೊಣೆಗಾರಿಕೆಯ ವೈಫಲ್ಯ ಎನ್ನಲಾಗದು ಎಂದು ಹೈಕೋರ್ಟಿನ ವಿಭಾಗೀಯ ಪೀಠ ಅರ್ಜಿಯನ್ನು ಸ್ವೀಕರಿಸಿಲ್ಲ. ಸರಕಾರದ ವಿರುದ್ಧ ಅರ್ಜಿ ಸಲ್ಲಿಸಿದ ಥಾಮಸ್ ಚಾಂಟಿಯ ಕ್ರಮ ಸಾಮೂಹಿಕ ಜವಾಬ್ದಾರಿಯ ಉಲ್ಲಂಘನೆಯಾಗಿದೆ ಎಂದು ಕೋರ್ಟ್ ಅಭಿಪ್ರಾಯಿಸಿದೆ.

ನಾಲ್ವರು ಸಚಿವರು ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳದ್ದರಿಂದ ಮುಖ್ಯಮಂತ್ರಿಗೆ  ಮುಂದುವರಿಯುವ ಹಕ್ಕಿಲ್ಲ ಎಂದು ವಾದಿಸಿ ಕೇರಳ, ಕೊಚ್ಚಿ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಆರ್‍.ಎಸ್. ಶಶಿಕುಮಾರ್ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News