ಮುಂದಿನ ಬಾರಿ ಗುಜರಾತ್ ನಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗೆಲ್ಲಲಿದೆ: ರಾಹುಲ್ ಗಾಂಧಿ
Update: 2017-12-23 20:46 IST
ಹೊಸದಿಲ್ಲಿ, ಡಿ.23: ಇತ್ತೀಚೆಗೆ ನಡೆದ ಗುಜರಾತ್ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಬಿಜೆಪಿ ತೀವ್ರ ಪ್ರತಿಸ್ಪರ್ಧೆ ಒಡ್ಡಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು ಅಭಿನಂದಿಸಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿನ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗುಜರಾತ್ 135 ಸೀಟುಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಗುಜರಾತ್ ಚುನಾವಣೆಯ ಸಂದರ್ಭ ಪಕ್ಷದೊಳಗಿನ ಕೆಲವರು ಪಕ್ಷದ ವಿರುದ್ಧ ಕೆಲಸ ಮಾಡಿದ್ದಾರೆ. ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದವರು ಹೇಳಿದ್ದಾರೆ.
“ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ 90 ಶೇ. ಮಂದಿ ಸಾಕಷ್ಟು ಪ್ರಯತ್ನಗಳನ್ನು ಮಾಡಿದ್ದಾರೆ. ಆದರೆ 5ರಿಂದ 10 ಶೇ. ಜನರು ನಮ್ಮ ಸಹಾಯಕ್ಕೆ ಬರಲಿಲ್ಲ. ಪಕ್ಷವು ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಿದೆ” ಎಂದವರು ಹೇಳಿದರು.