×
Ad

ಕಳ್ಳತನ: ಮೂವರ ಬಂಧನ

Update: 2017-12-23 22:54 IST

ಸಾಗರ, ಡಿ.23: ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಮನೆ ಕಳ್ಳತನ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಗ್ರಾಮಾಂತರ ಠಾಣೆ ಪೊಲೀಸರು ಶನಿವಾರ ವಶಕ್ಕೆ ಪಡೆದಿದ್ದಾರೆ. ನಗರದ ಇಂದಿರಾಗಾಂಧಿ ಕಾಲೇಜು, ಜಂಬಗಾರು ಬಡಾವಣೆ ಇನ್ನಿತರ ಕಡೆಗಳಲ್ಲಿ ಕಳ್ಳತನ ಮಾಡಿದ್ದ ಫಾರೂಕ್, ಇರ್ಷಾದ್ ಮತ್ತು ಸುನೀಲ್ ಎಂಬವರನ್ನು ವಶಕ್ಕೆ ಪಡೆದ ಪೊಲೀಸರು, ಬಂಧಿತರಿಂದ 3.41 ಲಕ್ಷ ರೂ. ಮೌಲ್ಯದ ಚಿನ್ನ, ಬೆಳ್ಳಿ ಆಭರಣ ಹಾಗೂ ದ್ವಿಚಕ್ರ ಾಹನವನ್ನು ವಶಕ್ಕೆ ಪಡೆದಿದ್ದಾರೆ.

ಡಿವೈಎಸ್ಪಿ ಮಂಜುನಾಥ್ ಬಿ. ಕವರಿ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಗ್ರಾಮಾಂತರ ಠಾಣೆ ಸಿಪಿಐ ಮಂಜುನಾಥ್, ಸಬ್ ಇನ್‌ಸ್ಪೆಕ್ಟರ್ ಸುರೇಶ್, ಸುಜಾತಾ , ಸಿಬ್ಬಂದಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News