ಜೈರಾಮ್ ಠಾಕೂರ್ ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿ

Update: 2017-12-24 09:07 GMT

ಶಿಮ್ಲಾ, ಡಿ.24: ಹಿಮಾಚಲ ಪ್ರದೇಶದ ಬಿಜೆಪಿ ಶಾಸಕಾಂಗ ಪಕ್ಷದ  ನಾಯಕರಾಗಿ ಮಾಜಿ ಸಚಿವ ಜೈರಾಮ್ ಠಾಕೂರ್  ಆಯ್ಕೆಯಾಗಿದ್ದಾರೆ.

ಇಂದು ನಡೆದ  ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸೆರಾಜ್ ಕ್ಷೇತ್ರದ ಬಿಜೆಪಿ ಶಾಸಕ ಠಾಕೂರ್ ಅವರು  ಮುಖ್ಯ ಮಂತ್ರಿ ಸ್ಥಾನಕ್ಕೆ ಒಮ್ಮತದಿಂದ ಆಯ್ಕೆಯಾದರು.

ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ನರೇಂದ್ರ ಸಿಂಗ್ ಥೋಮರ್ ಸಭೆಯಲ್ಲಿ ವೀಕ್ಷಕರಾಗಿದ್ದರು. ಮಾಜಿ ಮುಖ್ಯಮಂತ್ರಿ ಪ್ರೇಮ್ ಕುಮಾರ್ ಧುಮಲ್  ಅವರು ರಾಕೂರ್ ಅವರನ್ನು ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಸೂಚಿಸಿದರು. ಶಾಂತ ಕುಮಾರ್ ಮತ್ತು ಜೆ.ಪಿ.ನಡ್ಡಾ ಅನುಮೋದಿಸಿದರು. 

5 ಬಾರಿ ಶಾಸಕರಾಗಿ ಆಯ್ಕೆಯಾಗಿರುವ 52ರ ಹರೆಯದ ಜೈರಾಮ್ ಠಾಕೂರ್  ಅವರು 2007-2012ರ ತನಕ ಹಿಮಚಲ ಪ್ರದೇಶದ ಸರಕಾರದಲ್ಲಿ ಗ್ರಾಮೀಣ ಮತ್ತು ಪಂಚಾಯತ್ ರಾಜ್ ಸಚಿವರಾಗಿ  ಮತ್ತು 2006ರಿಂದ 2009ರ ತನಕ ರಾಜ್ಯ ಬಿಜೆಪಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News