×
Ad

ಡಿ.26;ರಾಷ್ಟ್ರೀಕೃತ ಬ್ಯಾಂಕ್‌ಗಳ ನೇಮಕಾತಿಯಲ್ಲಿ ಕನ್ನಡಿಗರಿಗೆ ಪ್ರಾತಿನಿಧ್ಯ

Update: 2017-12-25 18:20 IST

ಮಂಗಳೂರು. ಡಿ,25:ಕೇಂದ್ರ ಸರಕಾರ ಸ್ವಾಮ್ಯದ ಬ್ಯಾಂಕ್‌ಗಳ ನೇಮಕಾತಿಯಲ್ಲಿ ಕನ್ನಡಿಗರಿಗೆ ಪ್ರಾತಿನಿಧ್ಯ ಕಲ್ಪಿಸುವುದು ಸೇರಿದಂತೆ ಕನ್ನಡದ ಬಾಕಿ ಇರುವ ಕೆಲಸಗಳ ಬಗ್ಗೆ ತುರ್ತು ಗಮನಹರಿಸುವಂತೆ ಸಂಸತ್ತಿನ ಚಳಿಗಾಲದ ಅಧಿವೇಶನದ ಸಂದರ್ಭದಲ್ಲಿ ಕೇಂದ್ರ ಸರಕಾರದ ಸಚಿವರನ್ನು ಭೇಟಿ ಮಾಡಲು ಕರ್ನಾಟಕ ಸರಕಾರದ ಕನ್ನಡ ಅಭಿವೃದ್ಧಿ ಪ್ರಾಧಿಕಾರ ನಿಯೋಗ ರಚಿಸಿದೆ.ನಿಯೋಗ ಡಿ.26ರಂದು ದೆಹಲಿಯ ಕರ್ನಾಟಕ ಸಂಘದ ಅಧ್ಯಕ್ಷ ವಸಂತ ಶೆಟ್ಟಿ ಬೆಳ್ಳಾರೆಯವರ ನೇತೃತ್ವದಲ್ಲಿ ಸಚಿವರನ್ನು ಭೇಟಿ ಮಾಡಲಿದೆ ಎಂದು ಪ್ರಕಟಣೆ ತಿಳಿಸಿದೆ.

ನಿಯೋಗವು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ,ಮಾನವ ಸಂಪನ್ಮೂಲ ಖಾತೆಯ ಸಚಿವರಾದ ಪ್ರಕಾಶ್ ಜಾವಡೇಕರ್,ಆಡಳಿತ ಸುಧಾರಣಾ ಇಲಾಖೆಯ ರಾಜ್ಯ ಸಚಿವರಾದ ಜಿತೇಂದ್ರ ಸಿಂಗ್‌ರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಿದೆ.ಈ ನಿಯೋಗದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ,ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಡಾ.ಮನುಬಳಿಗಾರ್,ಡಾ.ಚಂದ್ರ ಶೇಖರ ಕಂಬಾರ,ಕವಿ ಡಾ.ಸಿದ್ದಲಿಂಗಯ್ಯ,ಡಾ.ಮುಖ್ಯ ಮಂತ್ರಿ ಚಂದ್ರು, ಡಾ.ಎಲ್.ಹನುಮಂತಯ್ಯ, ಬಿ.ಟಿ.ಲಲಿತಾ ನಾಯಕ್,ಡಾ.ನಾಗತಿಹಳ್ಳಿ ಚಂದ್ರ ಶೇಖರ್,ಡಾ.ಕೆ.ಮುರಳೀಧರ ಕಾರ್ಯದರ್ಶಿ ಕನ್ನಡ ಅಭಿವೃದ್ಧಿ ಪ್ರಾಧಿಕಾರಗಳನ್ನೊಳಗೊಂಡ ನಿಯೋಗ ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷರೊಂದಿಗೆ ಕೇಂದ್ರ ಸಚಿವರೊಂದಿಗೆ ಸಮಾಲೋಚನೆ ನಡೆಸಲಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News