×
Ad

ಬೈಕ್ ಅಡ್ಡಗಟ್ಟಿ ಖಾಲಿ ಕಾಗದಕ್ಕೆ ಸಹಿ ಹಾಕಿಸಿಕೊಂಡು ಪರಾರಿಯಾದ ಅಪರಿಚಿತರು !

Update: 2017-12-25 19:27 IST

 ಬೆಂಗಳೂರು, ಡಿ.25: ಬೈಕ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಕಾರಿನಲ್ಲಿ ಹಿಂಬಾಲಿಸಿ ಬಂದ ಮೂರು ಜನರು ಅಡ್ಡಗಟ್ಟಿ ಬೆದರಿಸಿ ಖಾಲಿ ಕಾಗದಕ್ಕೆ ಸಹಿ ಹಾಕಿಸಿಕೊಂಡು ಪರಾರಿಯಾಗಿರುವ ಘಟನೆ ನಗರದ ಚಿಕ್ಕಜಾಲದಲ್ಲಿ ನಡೆದಿದೆ.

ವಿಜಯ್‌ಕುಮಾರ್ ಎಂಬುವವರು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ವಿಐಟಿ ಕ್ರಾಸ್ ಬಳಿ ಕಾರಿನಲ್ಲಿ ಹಿಂಬಾಲಿಸಿ ಬಂದ ಮೂರು ಜನರು ವಾಹನಕ್ಕೆ ಢಿಕ್ಕಿ ಹೊಡೆದು ಬೀಳಿಸಿದ್ದಾರೆ. ಅನಂತರ ಕಾರಿನಿಂದ ಇಳಿದು ಬಂದು ಮೂರು ಜನರು ಅವರನ್ನು ಬೆದರಿಸಿ ಖಾಲಿ ಪತ್ರಕ್ಕೆ ಸಹಿ ಹಾಕಿಸಿಕೊಂಡು ಪರಾರಿಯಾಗಿದ್ದಾರೆ. ಈ ಕುರಿತು ಚಿಕ್ಕಜಾಲ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News