ದರೋಡೆಗೆ ಹೊಂಚು ಹಾಕುತ್ತಿದ್ದ ಐವರ ಬಂಧನ
ಬೆಂಗಳೂರು, ಡಿ.25: ಮಾರಕಾಸ್ತ್ರಗಳನ್ನು ಹಿಡಿದು ದರೋಡೆಗೆ ಹೊಂಚು ಹಾಕುತ್ತಿದ್ದ ಐವರು ಆರೋಪಿಗಳನ್ನು ಅತ್ತಿಬೆಲೆ ಪೊಲೀಸರು ಬಂಧಿಸಿದ್ದಾರೆ.
ತಮಿಳುನಾಡಿನ ಹೊಸೂರು ಮೂಲದ ವೆಂಕಟರಾಜು, ಶಂಕರ್, ಮುರಳಿ, ನಾಗೇಶ್ ಹಾಗೂ ನಾಗರಾಜ್ ಎಂಬುವವರು ಅತ್ತಿಬೆಲೆ ಸಮೀಪದ ಟಿವಿಎಸ್ ಕ್ರಾಸ್ ಬಳಿ ಮಧ್ಯರಾತ್ರಿ ಸಮಯದಲ್ಲಿ ಹೊಂಚು ಹಾಕಿ ವಾಹನಗಳನ್ನು ಅಡ್ಡಗಟ್ಟಿ ದರೋಡೆ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ.
ಈ ಕುರಿತು ಖಚಿತ ಮಾಹಿತಿ ಪಡೆದ ಅತ್ತಿಬೆಲೆ ಸಿಪಿಐ ರಾಜೇಶ್, ಎಸ್.ಐ ಗಜೇಂದ್ರ ಹಾಗೂ ಕ್ರೈಂ ಸಿಬ್ಬಂದಿ ಪ್ರಭು ಮತ್ತು ನಟರಾಜ್ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿ್ದಾರೆ.
ಬಂಧಿತ ಆರೋಪಿಗಳಿಂದ ಎರಡು ಲಾಂಗ್‌ಗಳನ್ನು ವಶಪಡಿಸಿಕೊಂಡು, ವಿಚಾರಣೆ ನಡೆಸಲಾಗಿದೆ. 10 ದಿನಗಳ ಹಿಂದೆ ವ್ಯಕ್ತಿಯೊಬ್ಬರ ವಾಹನ ಅಡ್ಡಗಟ್ಟಿ 20 ಸಾವಿರ ರೂ.ಗಳು ನಗದು ಪರ್ಸ್ ಹಾಗೂ ಚಿನ್ನಾಭರಣ ದೋಚಿದ ಪ್ರಕರಣ ಸೇರಿದಂತೆ ಅತ್ತಿಬೆಲೆ ಹಾಗೂ ಸರ್ಜಾಪುರದಲ್ಲಿ ನಡೆದಿದ್ದ ಸರಗಳ್ಳತನ ಪ್ರಕರಣ ಬೆಳಕಿಗೆ ಬಂದಿದೆ. ಪ್ರಮುಖ ಆರೋಪಿಗಳಾದ ನಾಗರಾಜು ಹಾಗೂ ಶಂಕರ್‌ನ ವೆುೀಲೆ ತಮಿಳುನಾಡಿನ ಹೊಸೂರು ಪೊಲೀಸ್ ಠಾಣೆಯಲ್ಲಿ 8 ಸರಗಳ್ಳತನ ಪ್ರಕರಣಗಳು ದಾಖಲಾಗಿವೆ ಎಂದು ತಿಳಿದುಬಂದಿದೆ.