ಕಾಪು: ಇಂದು ಜಿಲ್ಲಾ ಮಟ್ಟದ ಯುವ ಚೈತನ್ಯ ಸಮಾವೇಶ
ಉಡುಪಿ, ಡಿ.25: ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಜಿಲ್ಲಾ ಯುವ ಚೈತನ್ಯ ಸಮಾವೇಶ ನಾಳೆ ಕಾಪುವಿನ ಶ್ರೀಜನಾರ್ದನ ದೇವಸ್ಥಾನದ ವಠಾರದಲ್ಲಿ ಅಪರಾಹ್ನ 3:00ಗಂಟೆಗೆ ನಡೆಯಲಿದೆ ಎಂದು ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಮೃತ್ ಶೆಣೈ ತಿಳಿಸಿದ್ದಾರೆ.
ಉಡುಪಿಯಲ್ಲಿಂದು ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಮಾವೇಶವನ್ನು ರಾಜ್ಯಸಭಾ ಸದಸ್ಯ ಹಾಗೂ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡೀಸ್ ಉದ್ಘಾಟಿಸುವರು. ಕಾಪು ಶಾಸಕ ಹಾಗೂ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅಧ್ಯಕ್ಷತೆ ವಹಿಸುವರು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್, ಆಹಾರ ಸಚಿವ ಯು.ಟಿ.ಖಾದರ್, ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯ್ಲಿ, ವಿಧಾನಪರಿಷತ್ ಸದಸ್ಯರಾದ ಕೆ.ಪ್ರತಾಪ್‌ಚಂದ್ರ ಶೆಟ್ಟಿ, ರಿಜ್ವಾನ್ ಅರ್ಶದ್, ಬೈಂದೂರು ಶಾಸಕ ಕೆ.ಗೋಪಾಲ ಪೂಜಾರಿ, ಮಾಜಿ ಶಾಸಕ ಗೋಪಾಲ ಭಂಡಾರಿ, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಬಸವನಗೌಡ ಬಾದರ್ಲಿ, ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಮುಂತಾದ ನಾಯಕರು ಭಾಗವಹಿಸಲಿದ್ದಾರೆ.
ಬೂತ್ ಮಟ್ಟದಲ್ಲಿ ಯುವಕರನ್ನು ಸಂಘಟಿಸಿ, ಅವರಿಗೆ ನಾಯಕತ್ವವನ್ನು ನೀಡಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠ ಗೊಳಿಸುವ ಉದ್ದೇಶದಿಂದ ಹಾಗೂ ಯುವ ಕಾಂಗ್ರೆಸಿಗರಲ್ಲಿ ಹೊಸ ಹುಮ್ಮಸ್ಸು ಮೂಡಿಸಲು ಯುವ ಚೈತನ್ಯ ಸಮಾವೇಶವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿಶ್ವಾಸ್ ಕೆ.ಅಮೀನ್ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಯುವ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಝೀಜ್ ಹೆಜಮಾಡಿ ಹಾಗೂ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಹಬೀಬ್ ಅಲಿ ಉಪಸ್ಥಿತರಿದ್ದರು.