×
Ad

ವಾಜಪೇಯಿ ಅವರ 94ನೇ ಜನ್ಮದಿನದ ಅಂಗವಾಗಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

Update: 2017-12-25 20:09 IST

ಉಡುಪಿ, ಡಿ.25: ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 94ನೇ ಜನ್ಮದಿನದ ಅಂಗವಾಗಿ ಜಿಲ್ಲಾ ಯುವ ಮೋರ್ಚಾ ವತಿಯಿಂದ ಅಜ್ಜರಕಾಡಿನಲ್ಲಿರುವ ಜಿಲ್ಲಾ ಸರಕಾರಿ ಆಸ್ಪತ್ರೆಯ ಒಳ ರೋಗಿಗಳಿಗೆ ಹಾಗೂ ಅಂಬಲಪಾಡಿ ಬೆಳಕು ವೃದ್ಧಾಶ್ರಮದ ನಿವಾಸಿಗಳಿಗೆ ಹಣ್ಣು ಹಂಪಲು ಗಳನ್ನು ವಿತರಿಸಲಾಯಿತು.

ಅಲ್ಲದೇ ನೇಜಾರಿನಲ್ಲಿರುವ ಸ್ಪಂದನ ವಿಶೇಷ ಚೇತನ ಮಕ್ಕಳ ಶಾಲೆಗೆ ಯುವ ಮೋರ್ಚಾ ವತಿಯಿಂದ ಅಕ್ಕಿ, ಧಾನ್ಯವನ್ನು ವಿತರಿಸಲಾಯಿತು.
ಈ ಸಂದಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ್ ಹೆಗ್ಡೆ, ಯುವ ಮೋರ್ಚಾ ಜಿಲ್ಲಾಧ್ಯಕ್ಷ ಶ್ರೀಶ ನಾಯಕ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುಯಿಲಾಡಿ ಸುರೇಶ್ ನಾಯಕ್, ಯಶಪಾಲ್ ಸುವರ್ಣ, ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಪ್ರತಾಪ್ ಶೆಟ್ಟಿ ಚೇರ್ಕಾಡಿ, ಗಿರೀಶ್ ಆಂಚನ್, ಉಪಾಧ್ಯಕ್ಷ ಹರೀಶ್ ಪರ್ಕಳ, ಉಡುಪಿ ಜಿಲ್ಲಾ ಕಾರ್ಯದರ್ಶಿ ಪ್ರವೀಣ್ ಕಪ್ಪೆಟ್ಟು, ನಗರ ಬಿಜೆಪಿ ಯುವಮೋರ್ಚಾ ಕಾರ್ಯದರ್ಶಿ ರೋಷನ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News