ಮಧುಮೇಹ ರೋಗದ ಬಗ್ಗೆ ಜಾಗೃತಿ ಮೂಡಿಸಲು ಕರೆ

Update: 2017-12-25 16:26 GMT

ಮಂಡ್ಯ, ಡಿ.25: ದೇಶದಲ್ಲಿರುವ ಶೇ.50ರಷ್ಟು ಮಂದಿ ಮಧುಮೇಹ ರೋಗಕ್ಕೊಳಗಾಗಿ ಕಣ್ಣು ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದು, ಈ ಬಗ್ಗೆ ಜಾಗೃತಿ ಮೂಡಿಸಬೇಕಾಗಿದೆ ಎಂದು ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಎಚ್.ಎನ್.ಯೋಗೇಶ್ ಕರೆ ನೀಡಿದ್ದಾರೆ.

ಆದಿಚುಂಚನಗಿರಿ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ, ಮಂಡ್ಯ ಮಧುರ ಲಯನ್ಸ್ ಸಂಸ್ಥೆ, ಮಂಡ್ಯ ಗ್ರಾಮಾಂತರ ಗ್ರಾಮ ಪಂಚಾಯಿತಿ ವತಿಯಿಂದ ತಾಲೂಕಿನ ಚಿಂದಗಿರಿದೊಡ್ಡಿ ಸರಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಏರ್ಪಡಿಸಿದ್ದ ಉಚಿತ ನೇತ್ರ ತಪಾಸಣೆ ಮತ್ತು ಶಸ್ತ್ರಚಿಕಿತ್ಸಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ಈಚಿನ ದಿನಗಳಲ್ಲಿ ಮಧುಮೇಹಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ದೇಶದ ಅರ್ಧದಷ್ಟು ಜನ ಮಧುಮೇಹಿಗಳೆಂದರೆ ಆತಂಕದ ವಿಷಯ. ಸಾರ್ವಜನಿಕರು ಆರೋಗ್ಯದ ಕಡೆಗೆ ಹೆಚ್ಚಿನ ಗಮನಹರಿಸಬೇಕು ಎಂದು ಅವರು ಸಲಹೆ ನೀಡಿದರು.

ಲಯನ್ಸ್ ಸಂಸ್ಥೆ ಹೆಚ್ಚುವರಿ ಕಾರ್ಯದರ್ಶಿ ಕೆ.ಟಿ.ಹನುಮಂತು ಮಾತನಾಡಿ, ಸಕ್ಕರೆ ಕಾಯಿಲೆ ಇರುವಂತಹವರು ಕಣ್ಣು ಪರೀಕ್ಷೆಗಳನ್ನು ಆಗಿಂದಾಗ್ಗೆ ಮಾಡಿಸಿಕೊಳ್ಳುವುದು ಒಳ್ಳೆಯದು. ನಿತ್ಯ ಯೋಗ, ವ್ಯಾಯಾಮ, ಪೂರ್ವಿಕರ ಆಹಾರ ಪದ್ಧತಿ ಅನುಸರಿಸಿದರೆ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಬಹುದು ಎಂದರು.

ಜಿಪಂ ಸದಸ್ಯ ತೂಬಿನಕೆರೆ ರಾಮಲಿಂಗಯ್ಯ, ತಾಪಂ ಸದಸ್ಯೆ ಶಿವಕುಮಾರಿ, ಗ್ರಾಪಂ ಅಧ್ಯಕ್ಷೆ ಶಾರದಮ್ಮ, ಸದಸ್ಯರಾದ ವೇಣುಗೋಪಾಲ್, ಚನ್ನಬಸವಾಚಾರ್, ಸಿದ್ದರಾಜು, ಮಂಜು, ಮಂಡ್ಯ ಮಧುರ ಲಯನ್ಸ್ ಸಂಸ್ಥೆ ಅಧ್ಯಕ್ಷ ಜಿ.ಸಿ. ರಾಮು, ಲಯನ್ ಆನಂದ್ ಇತರರಿದ್ದರು.

ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗಡೆ ಹೇಳಿಕೆ ಖಂಡಿಸಿ ಮದ್ದೂರು ತಾಲೂಕು ಕಾಳಮುದ್ದನದೊಡ್ಡಿಯಲ್ಲಿ ದಲಿತಪರ ಸಂಘಟನೆಗಳಿಂದ ಸೋಮವಾರ ಸಚಿವರ ಪ್ರತಿಕೃತಿ ದಹಿಸಲಾಯಿತು. ಜಿಪಂ ಸದಸ್ಯ ಬೋರಯ್ಯ, ಮಾಜಿ ಸದಸ್ಯ ಎಚ್.ಹೊಂಬಯ್ಯ, ಸಮತಾ ಸೈನಿಕದಳದ ಜಿಲ್ಲಾಧ್ಯಕ್ಷ ಕರಡಕೆರೆ ಯೋಗೇಶ್, ಇತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News