×
Ad

ಬೈಕ್ ಢಿಕ್ಕಿ: ಸವಾರ ಮೃತ್ಯು

Update: 2017-12-26 19:27 IST

ಬೆಂಗಳೂರು, ಡಿ.26: ಬೈಕ್ ನಿಯಂತ್ರಣ ತಪ್ಪಿರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದ ಪರಿಣಾಮ ಉದ್ಯೋಗಿಯೊಬ್ಬ ಸಾವನ್ನಪ್ಪಿರುವ ಘಟನೆ ಆಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಆಡುಗೋಡಿಯ ನಿವಾಸಿ ಕೆ.ಪಿ.ಮಹೇಶ್(27) ಮೃತಪಟ್ಟಿರುವ ಉದ್ಯೋಗಿ ಎಂದು ಪೊಲೀಸರು ತಿಳಿಸಿದ್ದಾರೆ.  ಕಾಲ್‌ಸೆಂಟರ್‌ವೊಂದರ ಉದ್ಯೋಗಿಯಾಗಿದ್ದ ಮಹೇಶ್ ರಾತ್ರಿ 10:45ರ ಸುಮಾರಿಗೆ ಮಡಿವಾಳ ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಕೋರಮಂಗಲ 8ನೆ ಮುಖ್ಯರಸ್ತೆಯ ಶಾಲೆ ಬಳಿ ನಿಯಂತ್ರಣ ತಪ್ಪಿರಸ್ತೆ ಬದಿಯ ವಿಭಜಕಕ್ಕೆ ಬೈಕ್ ಢಿಕ್ಕಿ ಹೊಡೆದ ಪರಿಣಾಮವಾಗಿ ಮಹೇಶ್ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

 ಸುದ್ದಿ ತಿಳಿದ ಆಡುಗೋಡಿ ಪೊಲೀಸರು ಮೃತದೇಹವನ್ನು ಸೆಂಟ್‌ಜಾನ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆಗೆ ಒಳಪಡಿಸಿ ನಂತರ ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ. ಈ ಸಂಬಂಧ ಆಡುಗೋಡಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News