ಡಿ.28: ಮಂಗಳೂರಿನಲ್ಲಿ ಉದ್ಯೋಗ ಮೇಳ
ಮಂಗಳೂರು, ಡಿ.26: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಂಗಳೂರು ವತಿಯಿಂದ ಡಿ.28 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಇದರಲ್ಲಿ ವಿನ್ ಮ್ಯಾನ್ ಸಾಫ್ಟ್‌ವೇರ್, ಹಿಂಡುಜಾ ಗ್ಲೋಬಲ್ ಸರ್ವೀಸ್, ಮಾಂಡೊವಿ ಮೋಟಾರ್ಸ್, ಎಬಿಎಫ್ ಗ್ರೂಪ್ ಆಫ್ ಕಂಪೆನೀಸ್, ವುಡ್‌ಲ್ಯಾಂಡ್, ವಿ.ಕೆ. ಫರ್ನಿಚರ್ಸ್ ಆ್ಯಂಡ್ ಎಲೆಕ್ಟ್ರಾನಿಕ್ಸ್, ಮೈಕ್ರೋ ಲೋನ್ಸ್ ಬ್ಯುಸಿನೆಸ್ ಸಂಸ್ಥೆಗಳು ಭಾಗವಹಿಸಿ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಿದ್ದಾರೆ.
ಎಸೆಸೆಲ್ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಪದವಿ, ಸ್ನಾತಕೋತ್ತರ ವಿದ್ಯಾರ್ಹತೆಗಳನ್ನು ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.
ಆಸಕ್ತ ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿ, ಬಯೋಡಾಟಗಳೊಂದಿಗೆ ಆಗಮಿಸಿ ಇದರ ಸದುಪಯೋಗವನ್ನು ಪಡೆಯುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂ ಸಂ: 0824-2457139ನ್ನು ಸಂಪರ್ಕಿಸಲು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಪ್ರಕಟನೆ ತಿಳಿಸಿದೆ.