×
Ad

ಜ. 9ರಂದು ದ.ಕ., ಉಡುಪಿ ಜಿಲ್ಲಾಮಟ್ಟದ ಜೆಡಿಎಸ್ ಮಹಿಳಾ ಸಮಾವೇಶ

Update: 2017-12-26 22:09 IST

ಮಂಗಳೂರು, ಡಿ. 26: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾಮಟ್ಟದ ಸಮಾವೇಶವನ್ನು  ಜ.9ರಂದು ನಗರದ ನೆಹರು ಮೈದಾನದಲ್ಲಿ ಆಯೋಜಿಸಲಾಗಿದೆ ಎಂದು ಜೆಡಿಎಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಅರ್ಷಿಯಾ ಅಲಿ ಹೇಳಿದ್ದಾರೆ.

ಮಂಗಳವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಜಾತ್ಯತೀತ ಜನತಾ ದಳವನ್ನು ಸಂಘಟಿಸುವ ನಿಟ್ಟಿನಲ್ಲಿ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಜೆಡಿಎಸ್ ಕುರಿತು ಜನರಲ್ಲಿ ಉತ್ತಮ ಅಭಿಪ್ರಾಯವಿದೆ. ಪ್ರಾದೇಶಿಕ ಪಕ್ಷದ ಅಗತ್ಯವನ್ನು ಅರಿತು ಜನರು ಎಚ್.ಡಿ. ಕುಮಾರಸ್ವಾಮಿ ನೇತೃತ್ವವನ್ನು ಬಯಸುತ್ತಿದ್ದಾರೆ ಎಂದರು.

 ಬಿಜೆಪಿ ಮತ್ತು ಕಾಂಗ್ರೆಸ್‌ನ ಆಡಳಿತದಿಂದ ರಾಜ್ಯದ ಜನರು ಬೇಸತ್ತಿದ್ದಾರೆ. ಮಹಿಳೆಯರಿಗೆ ಭದ್ರತೆ ಇಲ್ಲದಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕಾರ್ಪೊರೇಟರ್‌ ರಮೀಝಾ ಬಾನು, ಜೆಡಿಎಸ್ ಮಹಿಳಾ ಘಟಕದ ಮುಖಂಡರಾದ ಸುಮತಿ ಹೆಗ್ಡೆ, ಚೂಡಾಮಣಿ, ಶ್ರೀಮಣಿ ಆರ್. ಶೆಟ್ಟಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News