×
Ad

​ವೈದ್ಯ ವಿದ್ಯಾರ್ಥಿನಿ ನೇಣಿಗೆ ಶರಣು

Update: 2017-12-26 22:11 IST

ಮಂಗಳೂರು, ಡಿ. 26: ನಗರದ ಕುಂಟಿಕಾನದಲ್ಲಿರುವ ವೈದ್ಯಕೀಯ ಕಾಲೇಜೊಂದರ ವಿದ್ಯಾರ್ಥಿನಿಯೋರ್ವರು ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ನಡೆದಿದೆ.

ಉಡುಪಿ ಸಾಸ್ತಾನ ಎಡಬೆಟ್ಟು ನಿವಾಸಿ ನಾಗರಾಜ ಐತಾಳ್ ಎಂಬವರ ಪುತ್ರಿ ಅಂಬಿಕಾ (22) ನೇಣಿಗೆ ಶರಣಾಗಿರುವ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ.

ಇವರು ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾಭ್ಯಾಸ ಮಾಡುತ್ತಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಕದ್ರಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News