ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಪಿ ಭೇಟಿ: ಪೂರ್ವಭಾವಿ ಸಭೆ
Update: 2017-12-27 21:50 IST
ಉಡುಪಿ, ಡಿ.27: ಮುಖ್ಯಮಂತ್ರಿ ಸಿದ್ದರಾಮಯ್ಯ ಜ. 8ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿದ್ದು, ಈ ಕುರಿತು ಕಾಪು ವಿಧಾನ ಸಭಾ ಕ್ಷೇತ್ರದ ಶಾಸಕ ವಿನಯಕುಮಾರ್ ಸೊರಕೆ ಇವರ ಅಧ್ಯಕ್ಷತೆಯಲ್ಲಿ ಡಿ.28 ರಂದು ಬೆಳಗ್ಗೆ 9ಕ್ಕೆ ಉಡುಪಿ ತಾಪಂ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಯಲಿದೆ ಎಂದು ಉಡುಪಿ ತಾಪಂ ಪ್ರಕಟನೆ ತಿಳಿಸಿದೆ.